ಬುಧವಾರ, ಮೇ 18, 2022
23 °C

ರಾಮನಗರ: ಬೆಂಕಿ‌ ತಗುಲಿ ಮನೆಗೆ ಹಾನಿ; ಮಾಲೀಕರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಮಾಗಡಿ ತಾಲ್ಲೂಕಿನ ಹಲಸಬೆಲೆ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಬಹುತೇಕ ಸುಟ್ಟುಹೋಗಿದೆ. ಮನೆ ಮಾಲೀಕರಿಗೂ ಗಾಯಗಳಾಗಿವೆ.

ಮಧ್ಯಾಹ್ನ 1.30ರ ಸುಮಾರಿಗೆ ಮನೆಗೆ ಬೆಂಕಿ ತಗುಲಿದೆ. ಈ ವೇಳೆ ಮಾಲೀಕ ಚಂದ್ರಶೇಖರ ಆಚಾರ್ ಮನೆಯಲ್ಲೇ ಮಲಗಿದ್ದು, ಬೆಂಕಿ ನೋಡಿ ಅಕ್ಕಪಕ್ಕದವರು ರಕ್ಷಣೆ ಮಾಡಿದರು. ಚಂದ್ರಶೇಖರ ಅವರ ಕಾಲಿಗೆ ಸುಟ್ಟ ಗಾಯಗಳಾಗಿದ್ದು, ಮಾಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಗ್ರಾಮಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು