ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೈರವದುರ್ಗ ಬೆಟ್ಟದಲ್ಲಿ ಬೆಂಕಿ

Published 16 ಫೆಬ್ರುವರಿ 2024, 13:41 IST
Last Updated 16 ಫೆಬ್ರುವರಿ 2024, 13:41 IST
ಅಕ್ಷರ ಗಾತ್ರ

ಕುದೂರು: ಪಟ್ಟಣದ ಇತಿಹಾಸ ಪ್ರಸಿದ್ಧ ಭೈರವದುರ್ಗ ಬೆಟ್ಟದಲ್ಲಿ ಗುರುವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿತ್ತು. ಒಣ ಸಸ್ಯಗಳು ಮತ್ತು ಪೊದೆಗಳಿಗೆ ಹರಡಿದ ಬೆಂಕಿಯನ್ನು ಅರಣ್ಯ ಇಲಾಖೆ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದೆ. 

ಬೆಟ್ಟಗಳ ಮೇಲಿನ ಒಣ ಹುಲ್ಲಿಗೆ ಸಂಜೆ ಬೆಂಕಿ ಕಾಣಿಸಿಕೊಂಡಿತ್ತು. ಇದನ್ನು ಗಮನಿಸಿದ ಬೆಟ್ಟದ ತಪ್ಪಲಿನ ನಿವಾಸಿಗಳು ಅರಣ್ಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅರಣ್ಯ ಸಿಬ್ಬಂದಿಯೊಂದಿಗೆ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಬೆಂಕಿಯನ್ನು ನಂದಿಸಲು ಕಾರ್ಯಾಚರಣೆ ಕೈಗೊಂಡರು.

ಕೆಲ ಕಿಡಿಗೇಡಿಗಳು ಭೈರವದುರ್ಗ ಬೆಟ್ಟದಲ್ಲಿ ಬೆಂಕಿ ಹಚ್ಚುವ ಕೃತ್ಯಕ್ಕೆ ಕೈ ಹಾಕುತ್ತಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. 

ಕುದೂರಿನ ಇತಿಹಾಸ ಪ್ರಸಿದ್ಧ ಭೈರವದುರ್ಗ ಬೆಟ್ಟದಲ್ಲಿ ಗುರುವಾರ ರಾತ್ರಿ ಕಾಣಿಸಿಕೊಂಡಿದ್ದ ಬೆಂಕಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ನಂದಿಸಿದರು
ಕುದೂರಿನ ಇತಿಹಾಸ ಪ್ರಸಿದ್ಧ ಭೈರವದುರ್ಗ ಬೆಟ್ಟದಲ್ಲಿ ಗುರುವಾರ ರಾತ್ರಿ ಕಾಣಿಸಿಕೊಂಡಿದ್ದ ಬೆಂಕಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ನಂದಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT