ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಕೆದಾಟು: ನೀರಲ್ಲಿ ಮುಳುಗಿ ಬೆಂಗಳೂರಿನ ಐವರು ವಿದ್ಯಾರ್ಥಿಗಳ ಸಾವು

Published 29 ಏಪ್ರಿಲ್ 2024, 11:29 IST
Last Updated 29 ಏಪ್ರಿಲ್ 2024, 11:29 IST
ಅಕ್ಷರ ಗಾತ್ರ

ಕನಕಪುರ: ಕಾವೇರಿ ನದಿ ಹರಿಯುವ ತಾಲ್ಲೂಕಿನ ಮೇಕೆದಾಟುಗೆ ಸೋಮವಾರ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಮೂವರು ಯುವತಿಯರು ಹಾಗೂ ಇಬ್ಬರು ಯುವಕರು ಸೇರಿ ಐವರು ವಿದ್ಯಾರ್ಥಿಗಳು ನದಿಯಲ್ಲಿ ಈಜುವಾಗ ಮುಳುಗಿ ಮೃತಪಟ್ಟಿದ್ದಾರೆ.

ಪೀಣ್ಯ ಎರಡನೇ ಹಂತದ ಹರ್ಷಿತ, ಅಭಿಷೇಕ್, ತೇಜಸ್, ವರ್ಷಾ ಹಾಗೂ ಸ್ನೇಹ ಮೃತರು. ಮೇಕೆದಾಟು ಬಳಿ ಆಳವಾದ ಜಾಗದಲ್ಲಿ ಈಜುವಾಗ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿ‌ ಕೊನೆಯುಸಿರೆಳೆದಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ, ಐವರ ಮೃತದೇಹಗಳನ್ನು ಹೊರಕ್ಕೆ ತೆಗೆದಿದ್ದಾರೆ. ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT