ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ | ಗೃಹ ಪ್ರವೇಶದ ಊಟ: 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Published 11 ಮೇ 2024, 0:10 IST
Last Updated 11 ಮೇ 2024, 0:10 IST
ಅಕ್ಷರ ಗಾತ್ರ

ರಾಮನಗರ: ತಾಲ್ಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಶುಕ್ರವಾರ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಮಾಡಿದ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ.

ಮಧ್ಯಾಹ್ನ ಊಟ ಮಾಡಿದ  ಕೆಲವರ ಆರೋಗ್ಯದಲ್ಲಿ ಏರುಪೇರಾಗಿದೆ. ಎಂಟು ಮಕ್ಕಳು ಸೇರಿದಂತೆ 25ಕ್ಕೂ ಹೆಚ್ಚು ಜನರಿಗೆ ಹೊಟ್ಟೆ ನೋವು, ವಾಂತಿ, ಭೇದಿಯಾಗಿದೆ. ಎಲ್ಲರನ್ನೂ ರಾಮನಗರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಲಾಗಿದೆ.

‘ಬೇಸಿಗೆ ಕಾರಣ ಆಹಾರ ಸೇವಿಸಿದ ನಂತರ ವ್ಯತ್ಯಾಸವಾಗಿದೆ. ಹೊಟ್ಟೆ ನೋವು, ವಾಂತಿ ಭೇದಿ ಕಾಣಿಸಿಕೊಂಡ ಕಾರಣ ಆಸ್ಪತ್ರೆ ದಾಖಲಾಗಿದ್ದಾರೆ’ ಎಂದು ಆರ್.ಎಂ.ಒ. ನಾರಾಯಣಸ್ವಾಮಿ ತಿಳಿಸಿದರು. ಎಲ್ಲರಿಗೂ ಚಿಕಿತ್ಸೆ ನೀಡಲಾಗಿದ್ದು, ಅಸ್ವಸ್ಥರಾಗಿರುವ ಮಕ್ಕಳಿಗೂ ಯಾವುದೇ ತೊಂದರೆ ಇಲ್ಲ ಎಂದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT