ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕಪುರ: ಒಡೆದ ನೀರಿನ ಪೈಪ್‌ ಸರಿಪಡಿಸಲು ಒತ್ತಾಯ

Published 29 ಏಪ್ರಿಲ್ 2024, 5:00 IST
Last Updated 29 ಏಪ್ರಿಲ್ 2024, 5:00 IST
ಅಕ್ಷರ ಗಾತ್ರ

ಕನಕಪುರ: ನಗರದ ಮಳಗಾಳು ರಸ್ತೆ ಅರ್ಕಾವತಿ ಸೇತುವೆ ಬಳಿ ಕನಕಪುರ ನಗರಕ್ಕೆ ನೀರು ಪೂರೈಕೆ ಮಾಡುವ ಪೈಪ್‌ ಒಡೆದಿದೆ. ಇದರಿಂದ ಲಕ್ಷಾಂತರ ಲೀಟರ್‌ ನೀರು ಪೋಲಾಗುತ್ತಿದ್ದು ಅದನ್ನು ಶೀಘ್ರವಾಗಿ ಸರಿಪಡಿಸಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.

ನಗರದಲ್ಲಿ ನೀರಿನ ಸಮಸ್ಯೆ ನಿವಾರಿಸಲು ನಗರಸಭೆಯು ಅರ್ಕಾವತಿ ನದಿಯಿಂದ ಕನಕಪುರಕ್ಕೆ ಪೈಪ್‌ ಮೂಲಕ ನೀರು ಪೂರೈಕೆ ಮಾಡುತ್ತದೆ. ಈಗ ಬೇಸಿಗೆ ಇರುವುದರಿಂದ ನಗರದ ಕೆಲ ಬೋರ್‌ವೆಲ್‌ಗಳಲ್ಲಿ ಅಂತರ್ಜಲ ಕಡಿಮೆಯಾಗಿ ನೀರಿನ ಅಭಾವ ಸೃಷ್ಟಿಯಾಗಿದೆ. ಇಂತಹ ಸಂದರ್ಭದಲ್ಲಿ ನಗರಕ್ಕೆ ಪ್ರಮುಖವಾಗಿ ನೀರು ಪೂರೈಕೆ ಮಾಡುತ್ತಿದ್ದ ಪೈಪ್‌ ಒಡೆದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT