ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಚಿತ ಆರೋಗ್ಯ ತಪಾಸಣಾ ಶಿಬಿರ: ದೈಹಿಕ ಚಟುವಟಿಕೆ ರೂಢಿಸಿಕೊಳ್ಳಲು ಸಲಹೆ

Published 8 ಡಿಸೆಂಬರ್ 2023, 5:46 IST
Last Updated 8 ಡಿಸೆಂಬರ್ 2023, 5:46 IST
ಅಕ್ಷರ ಗಾತ್ರ

ಚನ್ನಪಟ್ಟಣ: ಉತ್ತಮ ಆಹಾರ ಪದ್ಧತಿ ಅಳವಡಿಸಿಕೊಳ್ಳುವುದರ ಜತೆಗೆ ದಿನನಿತ್ಯ ಒಂದಿಲ್ಲೊಂದು ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಸಾರ್ವಜನಿಕ ಆಸ್ಪತ್ರೆ ಹಿರಿಯ ಫಾರ್ಮಾಸಿಸ್ಟ್ ವೇದಮೂರ್ತಿ ಅಭಿಪ್ರಾಯಪಟ್ಟರು.

ತಾಲ್ಲೂಕಿನ ವಿರುಪಾಕ್ಷಿಪುರ ಗ್ರಾಮದಲ್ಲಿ ಚಿಕ್ಕೇನಹಳ್ಳಿ ಸಂಜೀವ್ ಸಿದ್ದಾರ್ಥ ಟ್ರಸ್ಟ್ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿ, ಪ್ರತಿದಿನ ಹೆಚ್ಚು ನಡೆದಾಡುವ ಅಭ್ಯಾಸ ರೂಢಿಸಿಕೊಳ್ಳುವುದರಿಂದ ಆರೋಗ್ಯ ಉತ್ತಮಪಡಿಸಿಕೊಳ್ಳಬಹುದು ಎಂದರು.

ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ ಅಧ್ಯಕ್ಷೆ ಪುಷ್ಪಕಲಾ ಮುತ್ತುರಾಜ್ ಮಾತನಾಡಿ, ಇಂತಹ ಆರೋಗ್ಯ ಶಿಬಿರ ಹಳ್ಳಿಗಳಲ್ಲಿ ಹೆಚ್ಚು ನಡೆಯಬೇಕು. ಇದರಿಂದ ಗ್ರಾಮಾಂತರ ಪ್ರದೇಶದ ಜನಸಾಮಾನ್ಯರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸಲು ಸಾಧ್ಯ ಎಂದರು.

ಟ್ರಸ್ಟ್ ಕಾರ್ಯದರ್ಶಿ ಎಸ್.ಕುಮಾರ್ ಪ್ರಾಸ್ತವಿಕವಾಗಿ ಮಾತನಾಡಿ, ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಈ ಆರೋಗ್ಯ ಶಿಬಿರ ಏರ್ಪಡಿಸಲಾಗಿದೆ. ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಂಡು ಜೀವನ ಶೈಲಿಸಾಧ್ಯವಾದಷ್ಟು ಬದಲಾವಣೆ ಮಾಡಿಕೊಳ್ಳುವುದು ಉತ್ತಮ ಎಂದರು.

ಗ್ರಾ.ಪಂ. ಸದಸ್ಯೆ ರತ್ನಮ್ಮ ಜಯಣ್ಣ, ಗ್ರಾಮದ ಮುಖಂಡರಾದ ನಾಗರಾಜು, ಮುನಿಬೋರಯ್ಯ, ಶಿವ, ರಾಮಚಂದ್ರ, ಮಂಜುನಾಥ್, ಪ್ರದೀಪ್, ಪ್ರತಾಪ್, ಭರತ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT