ರಾಮನಗರ: ಗ್ರಾಮೀಣಾಭಿವೃದ್ಧಿ ಸಚಿವಾಲಯದಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯಿಂದ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಕುರಿತು 30 ದಿನಗಳ ಉಚಿತ ತರಬೇತಿ ಹಮ್ಮಿಕೊಳ್ಳಲಾಗಿದೆ. ಅ. 29ರಿಂದ ಆರಂಭವಾಗಲಿರುವ ತರಬೇತಿಗೆ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರುವ ಹಾಗೂ ಡಿಎಸ್ಎಲ್ಆರ್ ಕ್ಯಾಮೆರಾ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿ ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 924142581 ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.