ಕಳೆದ 11 ದಿನಗಳಲ್ಲಿ ನಾಲ್ಕು ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರ ಬಡವರ ಜೀವನದ ಮೇಲೆ ಬರೆ ಎಳೆದಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿರುವ ಕಾರಣ ದಿನನಿತ್ಯ ಬಳಸುವ ಎಲ್ಲ ವಸ್ತುಗಳ ಬೆಲೆ ಮುಂದೆ ಏರಿಕೆಯಾಗುತ್ತದೆ. ಆಗ ಮತ್ತಷ್ಟು ಸಮಸ್ಯೆ ಉಂಟಾಗಿ ಬಡವರ ಜೀವನ ಮತ್ತಷ್ಟು ಕಗ್ಗಂಟಾಗಿ ಕಷ್ಟಕರ ಜೀವನ ಮಾಡಬೇಕಾಗುತ್ತದೆ. ಕೂಡಲೇ ಕೇಂದ್ರ ಸರ್ಕಾರ ಬೆಲೆ ಏರಿಕೆ ನಿಲ್ಲಿಸಬೇಕು. ಜತೆಗೆ ಇಳಿಕೆ ಮಾಡಬೇಕು. ಇಲ್ಲದಿದ್ದರೆ ಜನಸಾಮನ್ಯರಿಂದ ಪ್ರತಿಭಟನೆ ಎದುರಿಸಬೇಕಾಗುತ್ತದೆ.

ಕೆ.ಎಸ್.ನಾಗರಾಜು, ಕೋಡಂಬಹಳ್ಳಿ, ಚನ್ನಪಟ್ಟಣ

ದಿನನಿತ್ಯದ ಬಳಕೆ ವಸ್ತುಗಳ ಬೆಲೆ ಏರಿಕೆ ನಡುವೆ ಪೆಟ್ರೋಲ್– ಡೀಸೆಲ್ ಬೆಲೆಯೂ ಏರುತ್ತಿರುವುದು ನಿಜಕ್ಕೂ ದುರಂತವಾಗಿದೆ. ಕೇಂದ್ರ ಸರ್ಕಾರ ಜನಸಾಮಾನ್ಯರ ಬದುಕನ್ನು ಸಂಕಷ್ಟಕ್ಕೆ ದೂಡುತ್ತಿದೆ. ಇತ್ತೀಚಿನ ದಿನಗಳಲ್ಲಿ ಬದುಕು ಸಾಗಿಸುವುದೇ ಕಷ್ಟಕರವಾಗಿರುವಾಗ ಕೆಲವೇ ದಿನಗಳಲ್ಲಿ ನಾಲ್ಕು ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡುವುದರ ಮೂಲಕ ಬಡವರ ಬದುಕು ಮತ್ತಷ್ಟು ದುರ್ಬರ ಮಾಡುತ್ತಿದೆ. ಯುದ್ಧದ ನೆಪ ಮಾಡಿಕೊಂಡು ಬೆಲೆ ಏರಿಕೆ ಮಾಡುವುದು ಸೂಕ್ತವಲ್ಲ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-14-1845996937

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.