ಶುಕ್ರವಾರ, ಜೂನ್ 18, 2021
20 °C

ಪಂಚಾಯಿತಿ ಸಿಬ್ಬಂದಿಯಿಂದ ಶವಸಂಸ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಪುರ: ಕೊರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಶವಸಂಸ್ಕಾರ ಮಾಡಲು ಮೃತರ ಕುಟುಂಬಸ್ಥರು ಮುಂದೆ ಬಾರದಿದ್ದರಿಂದ ಗ್ರಾಮ ಪಂಚಾಯಿತಿ ಪಿಡಿಒ ಮತ್ತು ಸಿಬ್ಬಂದಿಯೇ ಬುಧವಾರ ಅಂತ್ಯಕ್ರಿಯೆ ನೆರವೇರಿಸಿದರು.

ತಾಲ್ಲೂಕಿನ ಹಾರೋಹಳ್ಳಿ ಹೋಬಳಿಯ ಕೊಳ್ಳಿಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾರೇಪಾಳ್ಯದ ವಿನಾಯಕ ನಗರದ ನಾಗರಾಜು (55) ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದರು. ಅವರ ಅಂತ್ಯಸಂಸ್ಕಾರವನ್ನು ಪಿಡಿಒ ದೊಡ್ಡರಂಗೇಗೌಡ ಮತ್ತು ಪಂಚಾಯಿತಿ ಸಿಬ್ಬಂದಿ ನೆರವೇರಿಸಿದರು.

ನಾಗರಾಜ್‌ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಂಜೆ ನಿಧನರಾದರು.

ಮೃತರ ಮೃತದೇಹವನ್ನು ಗ್ರಾಮಕ್ಕೆ ತಂದಾಗ ಕುಟುಂಬದವರು ಶವಸಂಸ್ಕಾರ ನೆರವೇರಿಸಲು ಮುಂದೆ ಬರಲಿಲ್ಲ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು