ಭಾನುವಾರ, ಮೇ 16, 2021
25 °C

ಪರಮೇಶ್ವರ ಆಪ್ತ ರಮೇಶ್‌ ಆತ್ಮಹತ್ಯೆ: ಸುದ್ದಿ ಕೇಳಿ ತಂದೆ ಅಸ್ವಸ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಬೆಂಗಳೂರಿನಲ್ಲಿ ಶನಿವಾರ ಆತ್ಮಹತ್ಯೆ ಮಾಡಿಕೊಂಡಿರುವ ರಮೇಶ್ ರಾಮನಗರ ತಾಲ್ಲೂಕಿನ ಮೆಳೇಹಳ್ಳಿ ಗ್ರಾಮದವರು. ಸದ್ಯ ಅವರ ಮನೆಯಲ್ಲಿ ನೀರವ ಮೌನ ಆವರಿಸಿದ್ದು, ಸುದ್ದಿ ತಿಳಿಯುತ್ತಲೇ ಅವರ ತಂದೆ ಅಸ್ವಸ್ಥರಾಗಿದ್ದಾರೆ. ರಮೇಶ್‌ ಕಾಂಗ್ರೆಸ್‌ ಶಾಸಕ ಜಿ. ಪರಮೇಶ್ವರ ಅವರ ಆಪ್ತ ಸಹಾಯಕರಾಗಿದ್ದರು. 

ರಮೇಶ್ ಈ ಮೊದಲು ಕೆಪಿಸಿಸಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದು, ಕೆಲವು ವರ್ಷಗಳಿಂದ ಪರಮೇಶ್ವರ್ ಅವರ ಆಪ್ತ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಗುರುವಾರ ಐ.ಟಿ. ಅಧಿಕಾರಿಗಳು ಪರಮೇಶ್ವರ್ ಮನೆ, ಸಂಸ್ಥೆಗಳ ಮೇಲೆ ದಾಳಿ ನಡೆಸಿದ ಸಂದರ್ಭ ರಮೇಶ್ ಅವರನ್ನೂ ವಿಚಾರಣೆಗೆ ಒಳಪಡಿಸಿದ್ದರು ಎನ್ನಲಾಗಿದೆ. ಇದರಿಂದ ಮನನೊಂದು ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ದೂರಿದ್ದಾರೆ.

* ಇವನ್ನೂ ಓದಿ...

ಜಿ.ಪರಮೇಶ್ವರ ಆಪ್ತ ಸಹಾಯಕ ರಮೇಶ್‌ ಆತ್ಮಹತ್ಯೆ

ಐಟಿ ದಾಳಿ| ಪರಮೇಶ್ವರ ಆಪ್ತ ರಮೇಶ್ ಆತ್ಮಹತ್ಯೆಗೂ ಮುನ್ನ ಹೇಳಿದ್ದೇನು? ನಾನು ಬಡವ..

ಕಾಂಗ್ರೆಸ್‌ ಮುಖಂಡರಾದ ಪರಮೇಶ್ವರ, ಜಾಲಪ್ಪ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ಐ.ಟಿ ದಾಳಿ

ಐಟಿ ದಾಳಿ | ಮಂಗಳವಾರ ವಿಚಾರಣೆಗೆ ಹಾಜರಾಗುವೆ, ಪ್ರತಿಭಟನೆ ಬೇಡ: ಪರಮೇಶ್ವರ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು