ಸೋಮವಾರ, ಅಕ್ಟೋಬರ್ 18, 2021
23 °C
ಜಿಲ್ಲಾಡಳಿತದಿಂದ ರಾಷ್ಟ್ರಪಿತನ ಜಯಂತಿ ಆಚರಣೆ

ರಾಮನಗರ: ಗಾಂಧಿ ಸರಳ ಜೀವನ ಪಾಲಿಸಿ -ಜಿಲ್ಲಾಧಿಕಾರಿ ಕೆ. ರಾಕೇಶ್ ಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಮಹಾತ್ಮ ಗಾಂಧೀಜಿ ಪಾಲಿಸುತ್ತಿದ್ದ ಸತ್ಯ, ಅಹಿಂಸೆ ಮಾರ್ಗ ಹಾಗೂ ಸರಳ ಜೀವನವೇ ಸಮಾಜಕ್ಕೆ ಸಂದೇಶ ಎಂದು ಜಿಲ್ಲಾಧಿಕಾರಿ ಕೆ. ರಾಕೇಶ್ ಕುಮಾರ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಗಾಂಧಿ ಜಯಂತಿ ಅಂಗವಾಗಿ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿ ಅವರು ಮಾತನಾಡಿದರು.

ಶಾಂತಿ ಮತ್ತು ಅಹಿಂಸೆಯನ್ನು ಸ್ವಾತಂತ್ರ್ಯ ಹೋರಾಟದ ಅಸ್ತ್ರವನ್ನಾಗಿ ಅವರು ಬಳಸಿದರು. ವಿಶ್ವದಾದ್ಯಂತ ನಾವೀಗ ಕಾಣುತ್ತಿರುವ ಮಾನವ ಹಕ್ಕುಗಳ ಹೋರಾಟವು ಪ್ರಾರಂಭವಾಗಿದ್ದೇ ಇವರಿಂದ. ಅವರ ಗ್ರಾಮೀಣಾಭಿವೃದ್ಧಿ, ಮಹಿಳಾ ಸಬಲೀಕರಣ, ತ್ಯಾಜ್ಯ ವಸ್ತುಗಳ ನಿರ್ವಹಣೆಯ ಚಿಂತನೆಗಳನ್ನು ಇಂದು ಸಹ ನಾವು ಅಳವಡಿಸಿಕೊಳ್ಳುತ್ತಿದ್ದೇವೆ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ ಮಾತನಾಡಿ, ಸಬರಮತಿ ಆಶ್ರಮದಲ್ಲಿ ಅವರು ನಡೆಸಿದ ಸರಳ ಜೀವನ ಎಲ್ಲರಿಗೂ ಮಾದರಿ. ಅವರು ತಮ್ಮ ಕ್ಷೌರ, ಬಟ್ಟೆ, ಶೌಚಾಲಯದ ಸ್ವಚ್ಛತೆಯನ್ನು ತಾವೇ ಮಾಡಿಕೊಳ್ಳುತ್ತಿದ್ದರು. ಆಶ್ರಮದಲ್ಲಿ ಪ್ರಾರ್ಥನೆ ಮತ್ತು ಭಜನೆ ನಿರಂತರವಾಗಿ ನಡೆಯುತ್ತಿತ್ತು.‌ ಇದು ಅವರಿಗೆ ಮಾನಸಿಕ ಶಕ್ತಿ ನೀಡುತ್ತಿತ್ತು. ಅವರು ನೀಡಿರುವ ಆದರ್ಶದ ದಾರಿಯಲ್ಲಿ ಎಲ್ಲರೂ ಸಾಗೋಣ ಎಂದು ಸಲಹೆ ನೀಡಿದರು.

ಜಿಲ್ಲಾ ಆರೋಗ್ಯಾಧಿಕಾರಿ ನಿರಂಜನ್, ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್‌ ಚಂದ್ರಹಾಸ್, ರೇಷ್ಮೆ ಇಲಾಖೆಯ ಉಪ ನಿರ್ದೇಶಕ ಬಸವರಾಜು, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮುನೇಗೌಡ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಸಿ.ಆರ್. ನವೀನ್ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.