ಶುಕ್ರವಾರ, ಸೆಪ್ಟೆಂಬರ್ 24, 2021
27 °C

ಗಣೇಶ ಚತುರ್ಥಿ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾಗಡಿ: ತಾಲ್ಲೂಕಿನಾದ್ಯಂತ ಶುಕ್ರವಾರ ಗಣೇಶ ಚತುರ್ಥಿಯನ್ನು ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು.

ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸಿ ಪೂಜಿಸಲಾಯಿತು. ಕೆಲವರು ಮನೆಯಲ್ಲೂ ಗಣೇಶನ ಮೂರ್ತಿಯನ್ನಿಟ್ಟು ಪೂಜಿಸಿದರು. ಪಟ್ಟಣದ ಕಲ್ಯಾಬಾಗಿಲು ರಂಗನಾಥ್‌ ಎಲೆಕ್ಟ್ರಿಕ್‌ ಅಂಗಡಿಯಲ್ಲಿ ಮಿಕ್ಷಿ ಸೇರಿದಂತೆ ಇತರೆ ಯಂತ್ರಗಳನ್ನೇ ಗಣೇಶ ವಿಗ್ರಹದಂತೆ ಜೋಡಿಸಿ ಪೂಜಿಸಿದರು.

ಕಲ್ಯಾಬಾಗಿಲು ಸಾರ್ವಜನಿಕ ವಿನಾಯಕ ಸ್ವಾಮಿ ದೇವಾಲಯದಲ್ಲಿ ಗಣಪತಿ ಹೋಮ, ಅಭಿಷೇಕ ನೆರವೇರಿಸಿ ವಿಶೇಷವಾಗಿ ವಿನಾಯಕ ಚತುರ್ಥಿ ಆಚರಿಸಲಾಗುತ್ತಿದೆ. ಒಂಬತ್ತು ದಿನಗಳ ಕಾಲ ನಿತ್ಯ ವಿಶೇಷ ಪೂಜೆ ನಡೆಸಿ, ಸೇವಾಕರ್ತರು ಪ್ರಸಾದ ವಿತರಿಸುತ್ತಿದ್ದಾರೆ.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು