ಕುದೂರು: ಹಿಂದೂ ಮಹಾಗಣಪತಿ ಗಣೇಶೋತ್ಸವಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಹಿಂದೂ ಮಹಾ ಗಣೇಶೋತ್ಸವ ಸಮಿತಿ ಸದಸ್ಯರು ಮೊದಲನೇ ವರ್ಷದ ಅಂಗವಾಗಿ ಸುಮಾರು 5-6 ಅಡಿ ಎತ್ತರದ ಗಣಪತಿ ಪ್ರತಿಷ್ಠಾಪಿಸಿ ವಿಶೇಷ ಪೂಜೆ ನೆರವೇರಿಸಿದರು. ಪಟ್ಟಣದ ಹೃದಯ ಭಾಗದ ರಾಮಲೀಲಾ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ಗಣಪತಿ ಪ್ರತಿಷ್ಠಾಪನೆ ನಂತರ ಸಂಜೆ ಮಹಾಗಣಪತಿ ಹೋಮ ನಡೆಯಿತು. ಗಣೇಶೋತ್ಸವದ ಹಿನ್ನೆಲೆಯಲ್ಲಿ ಕ್ರೀಡಾಂಗಣದ ತುಂಬೆಲ್ಲಾ ವಿದ್ಯುತ್ ಅಲಂಕಾರ ಮಾಡಲಾಗಿತ್ತು. ಮಂಗಳವಾರ ಸಂಜೆ ಅದ್ದೂರಿಯಾಗಿ ಗಣಪತಿಯನ್ನು ವಿಸರ್ಜನೆ ಮಾಡಲಾಗುವುದು ಎಂದು ಆಯೋಜಕ ಸಂಜಯ್ ತಿಳಿಸಿದರು.