ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗೌಡಗೆರೆ ಚಾಮುಂಡೇಶ್ವರಿ ರಥೋತ್ಸವ

Published 5 ಆಗಸ್ಟ್ 2024, 6:08 IST
Last Updated 5 ಆಗಸ್ಟ್ 2024, 6:08 IST
ಅಕ್ಷರ ಗಾತ್ರ

ಚನ್ನಪಟ್ಟಣ: ತಾಲ್ಲೂಕಿನ ಗೌಡಗೆರೆಯ ಪ್ರಸಿದ್ಧ ಚಾಮುಂಡೇಶ್ವರಿ ಬಸವಪ್ಪ ಕ್ಷೇತ್ರದಲ್ಲಿ ಭಾನುವಾರ ಪ್ರತಿವರ್ಷದಂತೆ ಭೀಮನ ಅಮಾವಾಸ್ಯೆ ವಿಶೇಷಪೂಜಾ ಕಾರ್ಯಕ್ರಮ, ರಥೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿದವು.

ಶನಿವಾರ ಮಧ್ಯರಾತ್ರಿಯಿಂದ ಭಾನುವಾರ ಮಧ್ಯಾಹ್ನ 2 ಗಂಟೆಯವರೆಗೆ ಅಮ್ಮನವರ ಮೂಲವಿಗ್ರಹಕ್ಕೆ ಅಭಿಷೇಕ ಮಾಡಲು ಭಕ್ತರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿತ್ತು. ದೇವಿಗೆ ಮೂರು ಮಹಾಮಂಗಳಾರತಿ ನಡೆಯಿತು. ಮುಂಜಾನೆ ಮಧ್ಯರಾತ್ರಿಯಿಂದಲೇ ಸಾವಿರಾರು ಭಕ್ತರು ಸರತಿಸಾಲಿನಲ್ಲಿ ನಿಂತು ದೇವಿಗೆ ಪೂಜೆ ಸಲ್ಲಿಸಿದರು.

ಭಾನುವಾರ ಮಧ್ಯಾಹ್ನ 12.28ಕ್ಕೆ ರಥೋತ್ಸವಕ್ಕೆ ಕ್ಷೇತ್ರದ ಧರ್ಮದರ್ಶಿ ಮಲ್ಲೇಶ್ ಗುರೂಜಿ ಚಾಲನೆ ನೀಡಿದರು. ಚಾಮುಂಡೇಶ್ವರಿ ದೇವಿಯ ಮೂಲವಿಗ್ರಹವನ್ನು ರಥದಲ್ಲಿ ಕೂರಿಸಿ ದೇವಸ್ಥಾನದ ಆವರಣದಲ್ಲಿ ಎಳೆಯಲಾಯಿತು. ಯಾವುದೇ ವಿಶೇಷ ಅತಿಥಿಯನ್ನು ಆಹ್ವಾನಿಸದೆ ಭಕ್ತರಿಂದಲೇ ಕಾರ್ಯಕ್ರಮ ನಡೆಸಿದ್ದು ವಿಶೇಷವಾಗಿತ್ತು.

ಭೀಮನ ಅಮಾವಾಸ್ಯೆಯ ವಿಶೇಷಪುಜಾ ದಿನವಾದ ಭಾನುವಾರ ಕ್ಷೇತ್ರಕ್ಕೆ ಭಕ್ತಸಾಗರವೇ ಹರಿದುಬಂದಿತು. ಆಷಾಢ ಮಾಸದ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಕ್ಷೇತ್ರಕ್ಕೆ ಸಾವಿರಾರು ಭಕ್ತರು ಬರುತ್ತಿದೆ. ಭಕ್ತರಿಗೆ ಯಾವುದೇ ಅನನುಕೂಲವಾಗದಂತೆ ಕ್ರಮ ಕೈಗೊಳ್ಳಲಾಗಿತ್ತು.

ಹೊಸದಾಗಿ ನಿರ್ಮಿಸಿರುವ 25 ಅಡಿ ಎತ್ತರ ರಥವನ್ನು ದೇವಿಗೆ ಸಮರ್ಪಿಸಲಾಯಿತು. ಜೊತೆಗೆ ನೂತನ ದಾಸೋಹ ಭವನವನ್ನು ಸಹ ಇದೆ ವೇಳೆ ಲೋಕಾರ್ಪಣೆ ಮಾಡಲಾಯಿತು. ರಾಜ್ಯದ ಮೂಲೆಮೂಲೆಗಳಿಂದಲೂ ಬಂದಿದ್ದ ಸಾವಿರಾರು ಭಕ್ತರಿಗೆ ಕ್ಷೇತ್ರದ ವತಿಯಿಂದ ದಾಸೋಹ ಏರ್ಪಡಿಸಲಾಗಿತ್ತು.

ಇದೇ ವೇಳೆ ಕೇತ್ರದಲ್ಲಿ 86 ಅಡಿ ಎತ್ತರದ 16 ಬಾಹುಗಳ ಬೃಹತ್ ಚಾಮುಂಡೇಶ್ವರಿ ದೇವಿಯ ಪಾದದ ಕೆಳಗೆ ನಿರ್ಮಾಣ ಮಾಡಿರುವ ಮ್ಯೂಸಿಯಂ ಅನ್ನು ಲೋಕಾರ್ಪಣೆ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT