ಸೋಮವಾರ, ಮೇ 10, 2021
19 °C

ವಕೀಲರ ಸಂಘದ ಅಧ್ಯಕ್ಷರಾಗಿ ಗಿರೀಶ್ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚನ್ನಪಟ್ಟಣ: ವಕೀಲರ ಸಂಘದ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಟಿ.ವಿ.ಗಿರೀಶ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶಿವರಾಜು ಆಯ್ಕೆಯಾಗಿದ್ದಾರೆ.

ಇಲ್ಲಿನ ನ್ಯಾಯಾಲಯದ ಸಭಾಂಗಣದಲ್ಲಿ ಶನಿವಾರ ನಡೆದ ಅಧ್ಯಕ್ಷ ಸ್ಥಾನದ ಚುನಾವಣೆಗೆ ಗಿರೀಶ್, ಬೋಜೇಗೌಡ ಹಾಗೂ ಜೆ.ಟಿ.ಪ್ರಕಾಶ್ ಸ್ಪರ್ಧಿಸಿದ್ದರು. ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ವಕೀಲರಾದ ಶಿವರಾಜು ಹಾಗೂ ಶ್ರೀಧರ್ ನಾಮಪತ್ರ ಸಲ್ಲಿಸಿದ್ದರು.

ಉಪಾಧ್ಯಕ್ಷರಾಗಿ ಕೆ.ಟಿ.ರವಿ, ಖಜಾಂಚಿಯಾಗಿ ದೇವರಾಜು, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕೃಷ್ಣಪ್ಪ, ವಸಂತಮ್ಮ, ಅಂಬಿಕಾ, ಶಶಿಕುಮಾರ್, ದೇವರಾಜು, ಹನುಮಂತ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಶಿವರಾಜೇಗೌಡ, ನಾಗರಾಜಯ್ಯ, ಮಂಜು ಕಾರ್ಯ ನಿರ್ವಹಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು