ಐಎಂಎ ವಂಚನೆಗೊಳಗಾದವರಿಗೆ ನ್ಯಾಯ ಕೊಡಿಸುವೆ: ಎಚ್‌.ಡಿ ಕುಮಾರಸ್ವಾಮಿ

ಬುಧವಾರ, ಜೂಲೈ 17, 2019
29 °C

ಐಎಂಎ ವಂಚನೆಗೊಳಗಾದವರಿಗೆ ನ್ಯಾಯ ಕೊಡಿಸುವೆ: ಎಚ್‌.ಡಿ ಕುಮಾರಸ್ವಾಮಿ

Published:
Updated:

ರಾಮನಗರ: ಐಎಂಎ ವಂಚನೆ ಪ್ರಕರಣದ ಆರೋಪಿಗಳು ಎಷ್ಟೇ ಪ್ರಭಾವಿಗಳಾದರೂ ಸರ್ಕಾರವು ಒತ್ತಡಕ್ಕೆ ಮಣಿಯುವುದಿಲ್ಲ.‌ ಹಣ ತೊಡಗಿಸಿದವರಿಗೆ ನ್ಯಾಯ ಕೊಡಿಸುತ್ತೇನೆ ಎಂದು  ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ ನೀಡಿದರು.

ಚನ್ನಪಟ್ಟಣ ತಾಲ್ಲೂಕಿನ ಕಣ್ವ ಗ್ರಾಮದ ಬಳಿ ಮಂಗಳವಾರ ನೀರಾವರಿ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಐಎಂಎ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಗ್ರಾಮ ವಾಸ್ತವ್ಯಕ್ಕೆ ಮುನ್ನ ಡಿಐಜಿ‌ ಹಾಗೂ ಸರ್ಕಾರದ ಕಾರ್ಯದರ್ಶಿಗಳೊಂದಿಗೆ ಈ ಸಂಬಂಧ ಸಭೆ ನಡೆಸುತ್ತೇನೆ. ಆರೋಪಿಗಳು ವಿದೇಶಕ್ಕೆ ಹಾರಿದ್ದರೂ ಪರವಾಗಿಲ್ಲ. ಮೋಸ ಹೋದವರಿಗೆ ನ್ಯಾಯ‌ ಕೊಡಿಸುತ್ತೇನೆ. ಈ ಬಗ್ಗೆ ಅನುಮಾನ‌ ಬೇಡ ಎಂದರು. 

ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ನ್ಯಾಯಾಲಯಗಳು ಯಾವ ನಿರ್ಬಂಧವನ್ನೂ‌‌ ಹೇರಿಲ್ಲ. ತಮಿಳುನಾಡು ಸರ್ಕಾರಕ್ಕೆ ಈ ಬಗ್ಗೆ ಮಾಹಿತಿಯ ಕೊರತೆ ಹಾಗೂ ರಾಜಕೀಯ ಕಾರಣಗಳಿಗೆ ವಿರೋಧ ವ್ಯಕ್ತಪಡಿಸುತ್ತಿದೆ. ಕೇಂದ್ರ ಸಚಿವರಿಗೂ ಇದನ್ನು ಮನವರಿಕೆ ಮಾಡಲಾಗಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬರಹ ಇಷ್ಟವಾಯಿತೆ?

 • 5

  Happy
 • 3

  Amused
 • 0

  Sad
 • 0

  Frustrated
 • 3

  Angry

Comments:

0 comments

Write the first review for this !