ಗುರುವಾರ , ಆಗಸ್ಟ್ 5, 2021
26 °C

‘ತಿಗಳ ಜನಾಂಗಕ್ಕೆ ಆದ್ಯತೆ ನೀಡಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾಗಡಿ: ವಿಧಾನ ಪರಿಷತ್‌ ಚುನಾವಣೆಯಲ್ಲಿ ಆಯ್ಕೆ ಸಂದರ್ಭದಲ್ಲಿ ನಿರ್ಲಕ್ಷಿತ ಸಮುದಾಯವಾದ ತಿಗಳ ಜನಾಂಗಕ್ಕೆ ಆದ್ಯತೆ ನೀಡುವಂತೆ ಕರ್ನಾಟಕ ರಾಜ್ಯ ತಿಗಳ ಮಹಾಸಭಾ ವತಿಯಿಂದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಗಿದೆ ಎಂದು ಬಿಜೆಪಿ ಮುಖಂಡ ಎ.ಎಚ್.ಬಸವರಾಜು ತಿಳಿಸಿದರು.

ಸುದ್ದಿಗಾರರೊಂದಿಗೆ ತಿಗಳರ ಸಂಘದಲ್ಲಿ ಮಾತನಾಡಿದ ಅವರು,  ರಾಜ್ಯದಲ್ಲಿ ಸಮುದಾಯದ 40 ಲಕ್ಷ ಮಂದಿ ಇದ್ದಾರೆ. ಎಲ್ಲರೂ ಬಿಜೆಪಿ ಪಕ್ಷವನ್ನು ಬೆಂಬಲಿಸಿದ್ದೇವೆ. ಮಾಗಡಿ ತಾಲ್ಲೂಕಿನಲ್ಲಿ ನಮ್ಮ ಜನಾಂಗದ 13 ಸಾವಿರ ಮತದಾರರಿದ್ದಾರೆ. ಪರಿಷತ್‌ ಚುನಾವಣೆಯಲ್ಲಿ ಸಮುದಾಯದವರಿಗೂ ಆದ್ಯತೆ ನೀಡುವಂತೆ ಕೋರಲಾಗಿದೆ ಎಂದು ತಿಳಿಸಿದರು. 

30 ವರ್ಷಗಳಿಂದಲೂ ಬಿಜೆಪಿ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಿದ್ದು, ನನಗೆ ಅವಕಾಶ ನೀಡಿದರೆ ಸಮುದಾಯದ ದನಿಯಾಗಿ ಕೆಲಸ ಮಾಡಲಿದ್ದೇನೆ ಎಂದು ಹೇಳಿದರು. 

ಬಿಬಿಎಂಪಿ ಸದಸ್ಯ ಶಿವಕುಮಾರ್‌, ನಿವೃತ್ತ ಎಸಿಪಿ ಸುಬ್ಬಣ್ಣ, ಪುರಸಭೆ ಸದಸ್ಯರಾದ ಅಶ್ವತ್ಥ, ಜಯರಾಮು, ವೆಂಕಟರಾಮು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.