ಶುಕ್ರವಾರ, ಫೆಬ್ರವರಿ 21, 2020
18 °C

ಬ್ಯಾಸ್ಕೆಟ್‌ ಬಾಲ್‌ನಲ್ಲಿ ಚಿನ್ನದ ಪದಕ ಗಳಿಸಿದ ಶಿಕ್ಷಕಿ ಎಸ್‌.ಎನ್‌.ರೇಷ್ಮಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಪುರ: ಇಲ್ಲಿನ ಜಕ್ಕಸಂದ್ರ ಜೈನ್‌ ಕಾಲೇಜಿನ ಇಂಗ್ಲಿಷ್ ಶಿಕ್ಷಕಿ ಎಸ್‌.ಎನ್‌.ರೇಷ್ಮಾ 3ನೇ ರಾಷ್ಟ್ರೀಯ ಮಾಸ್ಟರ್ಸ್ ಕ್ರೀಡಾಕೂಟ ಬ್ಯಾಸ್ಕೆಟ್‌ ಬಾಲ್‌ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಗುಜರಾತ್‌ನ ವಡೋದರಾದಲ್ಲಿ ಫೆ.5ರಿಂದ 9ರವರೆಗೆ ನಡೆದ ಕ್ರೀಡಾಕೂಟದಲ್ಲಿ 40ವರ್ಷ ಮೇಲ್ಪಟ್ಟ ವಿಭಾಗದಲ್ಲಿ ಅವರು  ರಾಜ್ಯವನ್ನು ಪ್ರತಿನಿಧಿಸಿದ್ದರು.

ಸೆಮಿಫೈನಲ್‌ನಲ್ಲಿ ಗುರುರಾತ್‌ ವಿರುದ್ಧ ಆಟವಾಡಿ ಫೈನಲ್‌ನಲ್ಲಿ ಕೇರಳ ತಂಡದ ವಿರುದ್ಧ ಸೆಣಸಾಡಿ ರೋಚಕ ಜಯಗಳಿಸಿದ್ದಾರೆ. 2020ರ ನವೆಂಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯುವ ಫ್ಯಾನ್‌ ಫೆಸಿಪಿಕ್‌ ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲೂ ಗೆದ್ದು ದೇಶಕ್ಕೆ ಕೀರ್ತಿ ತರಲಿ ಎಂದು ಜೈನ್‌ ವಿದ್ಯಾನಿಕೇತನ, ಜೈನ್‌ ವಿದ್ಯಾಸಂಸ್ಥೆ ಶುಭ ಕೋರಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು