ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ ಸಂಪೂರ್ಣ ಲಾಕ್‌ಡೌನ್‌: ಬಿಕೋ ಎಂದ ಬೆಂಗಳೂರು-ಮೈಸೂರು ಹೆದ್ದಾರಿ

ಅಗತ್ಯ ವಸ್ತು ಖರೀದಿಗೆ ಮಾತ್ರ ಅವಕಾಶ
Last Updated 5 ಜುಲೈ 2020, 13:43 IST
ಅಕ್ಷರ ಗಾತ್ರ

ರಾಮನಗರ: ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ರಾಜ್ಯ ಸರ್ಕಾರವು ವಿಧಿಸಿದ್ದ ಭಾನುವಾರದ ಲಾಕ್‌ಡೌನ್‌ಗೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನಜೀವನ ಬಹುತೇಕ ಸ್ತಬ್ಧವಾಗಿತ್ತು.

ಶನಿವಾರ ರಾತ್ರಿಯಿಂದಲೇ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿತ್ತು. ಭಾನುವಾರ ಮುಂಜಾನೆ ಕೆಎಸ್‌ಆರ್‌ಟಿಸಿ ಬಸ್‌ಗಳು ರಸ್ತೆಗೆ ಇಳಿಯಲಿಲ್ಲ. ಇಡೀ ಬಸ್ ನಿಲ್ದಾಣ ಬಿಕೋ ಎನ್ನುತಿತ್ತು. ಖಾಸಗಿ ವಾಹನಗಳ ಓಡಾಟಕ್ಕೂ ಕಡಿವಾಣ ಹಾಕಲಾಗಿತ್ತು. ಆಟೊಗಳ ಸಂಚಾರ ಸಹ ಇರಲಿಲ್ಲ. ಹೀಗಾಗಿ ಬೆಂಗಳೂರು-ಮೈಸೂರು ಹೆದ್ದಾರಿ ಪೂರ ಖಾಲಿಖಾಲಿಯಾಗಿತ್ತು. ದಿನಬಳಕೆ ವಸ್ತು ಹಾಗೂ ಆರೋಗ್ಯ ಸೇವೆ ಹೊರತುಪಡಿಸಿ ಉಳಿದೆಲ್ಲ ಅಂಗಡಿ-ಮುಂಗಟ್ಟುಗಳು ಮುಚ್ಚಿದ್ದವು. ಹೋಟೆಲ್‌ಗಳು ಸಹ ಬಾಗಿಲು ತೆರೆಯಲು ಅನುಮತಿ ಇರಲಿಲ್ಲ. ಮದ್ಯದಂಗಡಿಗಳ ಬಾಗಿಲಿಗೂ ಬೀಗ ಬಿದ್ದಿತ್ತು.

ಅತ್ಯಗತ್ಯ ವಸ್ತುಗಳ ಮಾರಾಟಕ್ಕೆ ಜಿಲ್ಲಾಡಳಿತ ಅವಕಾಶ ನೀಡಿತ್ತು. ಹಾಲು, ಹಣ್ಣು, ತರಕಾರಿ, ದಿನಸಿ ಮಾರಾಟದ ಅಂಗಡಿಗಳು ತೆರೆದಿದ್ದವು. ಕೆಲವು ಕಡೆ ಬೆಳಗ್ಗೆ ಮಾಂಸದ ಅಂಗಡಿಗಳಲ್ಲೂ ಮಾರಾಟ ನಡೆಯಿತು. ಆಸ್ಪತ್ರೆ, ಕ್ಲಿನಿಕ್‌ಗಳು, ಔಷಧದ ಅಂಗಡಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.

ಜಿಲ್ಲೆಯ ಪೆಟ್ರೋಲ್ ಬಂಕ್‍ಗಳು ಭಾನುವಾರ ಎಂದಿನಂತೆ ಕಾರ್ಯ ನಿರ್ವಹಿಸಿದವು. ಹೀಗಾಗಿ ದ್ವಿಚಕ್ರ ವಾಹನ ಸವಾರರು ಬಂಕ್‌ಗಳಲ್ಲಿ ಪೆಟ್ರೋಲ್‌ ಹಾಕಿಸುವ ಸಲುವಾಗಿ ನಗರದ ತುಂಬೆಲ್ಲ ಓಡಾಡಿದರು. ಅನಗತ್ಯವಾಗಿ ಓಡಾಡುವವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದರಾದರೂ ಕೆಲ ಯುವಕರು ಇದನ್ನು ಲೆಕ್ಕಸದೇ ತಿರುಗಾಡಿದ್ದು ಕಂಡು ಬಂದಿತು. ನಗರದ ಪ್ರಮುಖ ವೃತ್ತಗಳೂ, ಜಿಲ್ಲೆಯ ಗಡಿ ಭಾಗಗಳಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದರು. ಕೆಲವು ಕಡೆ ಸಿಬ್ಬಂದಿ ಕಾವಲಿಗೆ ನಿಂತಿದ್ದರು.

ಏನೇನು ತೆರೆದಿತ್ತು?
ಆಸ್ಪತ್ರೆ, ಔಷಧಾಲಯ, ದಿನಸಿ ಅಂಗಡಿ, ಪೆಟ್ರೋ‌ಲ್‌ ಬಂಕ್‌

ಏನೇನು ಬಂದ್‌?
ಎಪಿಎಂಸಿ, ರೇಷ್ಮೆ ಮಾರುಕಟ್ಟೆ, ಹೋಟೆಲ್‌, ಕೆಎಸ್‌ಆರ್‌ಟಿಸಿ ಬಸ್‌, ಆಟೊ, ಬಾರ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT