ಶುಕ್ರವಾರ, ಜನವರಿ 24, 2020
20 °C

ರಾಮನಗರ: ಪ್ರಜಾವಾಣಿ ಫೋನ್ ಇನ್ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಇಲ್ಲಿನ  ಪ್ರಜಾವಾಣಿ ಕಚೇರಿಯಲ್ಲಿ ಗುರುವಾರ ಬೆಳಗ್ಗೆ ನಡೆದ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರೊಂದಿಗಿನ ಫೋನ್ ಇನ್ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ಬೆಳಿಗ್ಗೆ 10ಕ್ಕೆ ಸರಿಯಾಗಿ ಕಾರ್ಯಕ್ರಮ ಆರಂಭಗೊಂಡಿದ್ದು, ಒಂದು ಗಂಟೆ ಕಾಲ ಸತತವಾಗಿ‌ ಕರೆಗಳು ಬಂದವು. ದೂರವಾಣಿ ಮೂಲಕವೇ ಜನರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ, ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಭರವಸೆ ನೀಡಿದರು. ಪೋಡಿ ತಿದ್ದುಪಡಿ, ಇ-ಖಾತೆ, ರಸ್ತೆ ವಿಸ್ತರಣೆ, ಕಸ ನಿರ್ವಹಣೆ, ಸರ್ಕಾರಿ ಜಾಗಗಳ ಒತ್ತುವರಿ, ಪಿಂಚಣಿ ಯೋಜನೆಗಳಲ್ಲಿನ ಅವ್ಯವಸ್ಥೆ, ಸರ್ಕಾರಿ ಕಚೇರಿಗಳಲ್ಲಿನ ಭ್ರಷ್ಟಾಚಾರ ಮೊದಲಾದ ಸಮಸ್ಯೆಗಳ ಕುರಿತು ಜನರು ದೂರಿದರು. ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು