ಸರ್ಕಾರಿ ನೌಕರರ ಸಂಘದ ಚುನಾವಣೆ ಜೂನ್ 13ಕ್ಕೆ

ಸೋಮವಾರ, ಜೂನ್ 17, 2019
23 °C

ಸರ್ಕಾರಿ ನೌಕರರ ಸಂಘದ ಚುನಾವಣೆ ಜೂನ್ 13ಕ್ಕೆ

Published:
Updated:

ಚನ್ನಪಟ್ಟಣ: ತಾಲ್ಲೂಕು ಸರ್ಕಾರಿ ನೌಕರರ ಸಂಘದ ಇಲಾಖಾವಾರು ಚುನಾವಣೆ ಜೂನ್ 13 ರಂದು ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎನ್.ಎಸ್. ಸಿದ್ದೇಗೌಡ ಹಾಗೂ ಕಾರ್ಯದರ್ಶಿ ಹೇಮಾವತಿ ತಿಳಿಸಿದ್ದಾರೆ.

ಮೇ 27 ರ ಸೋಮವಾರ ನಾಮಪತ್ರ ಅರ್ಜಿ ವಿತರಣೆ, ಜೂನ್ 3 ರ ಸೋಮವಾರ ನಾಮಪತ್ರ ಸಲ್ಲಿಸಲು ಕಡೆಯ ದಿನಾಂಕ. ಅಂದೇ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು. ಜೂನ್ 4 ರ ಮಂಗಳವಾರ ನಾಮಪತ್ರ ವಾಪಸ್ ಪಡೆಯಲು ಕಡೆಯ ದಿನಾಂಕವಾಗಿದ್ದು, ಅಂದು ಸಂಜೆ ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಜೂನ್ 13 ರ ಗುರುವಾರ ಚುನಾವಣೆ ನಡೆಯಲಿದ್ದು, ಅಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆyವರೆಗೆ ಮತದಾನ ನಡೆಯಲಿದೆ. ಮತದಾನದ ನಂತರ ಮತ ಎಣಿಕೆ ಕಾರ್ಯ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಹೆಚ್ಚಿನ ವಿವರಗಳಿಗೆ ಚುನಾವಣಾಧಿಕಾರಿ ಬಿ.ಪಿ.ಪ್ರಭುಸ್ವಾಮಿ (96116 78407) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !