ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸರ್ಕಾರಿ ನೌಕರರು ಉತ್ತಮ ಸೇವೆ ನೀಡಿ’

ಜಿಲ್ಲೆಯ 84 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ
Last Updated 10 ಏಪ್ರಿಲ್ 2021, 14:25 IST
ಅಕ್ಷರ ಗಾತ್ರ

ರಾಮನಗರ: ಸರ್ಕಾರಿ ನೌಕರರ ಬಗ್ಗೆ ಸಮಾಜದಲ್ಲಿ ಗೌರವ ಇದೆ. ಇದನ್ನು ಅರಿತು ಪ್ರತಿಯೊಬ್ಬರು ಉತ್ತಮ ಸೇವೆ ಮಾಡಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಿವಕುಮಾರ್ ಸಲಹೆ ನೀಡಿದರು.

ನಗರದ ಗುರುಭವನದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಹಮ್ಮಿಕೊಂಡಿದ್ದ ಸರ್ಕಾರಿ ನೌಕರರ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೋವಿಡ್ ಸಂಕಷ್ಟದ ಕಾಲದಲ್ಲಿ ಸರ್ಕಾರಿ ನೌಕರರಿಗೆ ವೇತನ, ಬಡ್ತಿ ನಿಲ್ಲಲಿಲ್ಲ. ಆದರೆ ಖಾಸಗಿ ಕ್ಷೇತ್ರದಲ್ಲಿ ಅನೇಕ ನೌಕರರು ತಮ್ಮ ಕೆಲಸವನ್ನೇ ಕಳೆದು ಕೊಂಡರು. ಹೀಗಾಗಿಯೇ ಸರ್ಕಾರಿ ನೌಕರಿಗೆ ಬೇಡಿಕೆ ಹೆಚ್ಚು ಎಂದರು.

ಶಿಕ್ಷಣವೇ ನಮ್ಮ ಶಕ್ತಿ. ಅದರಿಂದಲೇ ಮುಂದೆ ನಾವು ಉನ್ನತ ಹುದ್ದೆ ಅಲಂಕರಿಸಬಹುದು. ಪೋಷಕರು ಅಂಕ ಗಳಿಕೆಗೆ ತಮ್ಮ ಮಕ್ಕಳ ಮೇಲೆ ಒತ್ತಡ ಹೇರುವುದು ಸಹಜ, ಆದರೆ ಈ ಒತ್ತಡದ ಹಿಂದೆ ಅವರ ಕಾಳಜಿಯನ್ನು ಅರ್ಥ ಮಾಡಿಕೊಳ್ಳಿ. ಸುದ್ದಿಪತ್ರಿಕೆ, ಸಾಹಿತ್ಯ ಪುಸ್ತಕಗಳನ್ನು ಓದಿ ಜ್ಞಾನ ಭಂಡಾರ ವಿಸ್ತರಿಸಿಕೊಳ್ಳಿ, ಸುದ್ದಿ ಚಾನಲ್‍ಗಳಲ್ಲಿ ಪ್ರಚಲಿತ ವಿದ್ಯಾಮಾನಗಳ ಬಗೆಗಿನ ಸಂವಾದವನ್ನು ಆಲಿಸಿ ಎಂದು ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ರಾಮನಗರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಕೆ.ಬೈರಲಿಂಗಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರಿ ನೌಕರರ ಸಮಸ್ಯೆಗಳಿಗೆ ಮಾತ್ರ ಸಂಘ ಸೀಮಿತವಾಗದೆ, ಸಾರ್ವಜನಿಕ ಕಾಳಜಿ ಉಳ್ಳ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದರು.

ರಾಜ್ಯದಲ್ಲಿ ಸರ್ಕಾರಿ ನೌಕರರ ಕುಟುಂಬಗಳ ಪೈಕಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಪಡೆದ 3500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಹರಾಗಿದ್ದಾರೆ. ಜಿಲ್ಲೆಯಲ್ಲಿ 53 ಮಂದಿ ಎಸ್ಸೆಸ್ಸೆಲ್ಸಿ ಮತ್ತು 31 ಮಂದಿ ದ್ವಿತೀಯ ಪಿಯು ವಿದ್ಯಾರ್ಥಿಗಳು ಸೇರಿ 84 ಮಂದಿಗೆ ಈ ಪ್ರತಿಭಾ ಪುರಸ್ಕಾರ ಸಿಗುತ್ತಿದೆ. ಕೋವಿಡ್ ಕಾರಣ ಆಯಾ ಜಿಲ್ಲೆಗಳಲ್ಲೇ ಜಿಲ್ಲಾ ಘಟಕಗಳ ಮೂಲಕ ರಾಜ್ಯ ಮಟ್ಟದ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಡಯೆಟ್‍ನ ಹಿರಿಯ ಉಪನ್ಯಾಸಕ ಮುನಿಕೆಂಪೇಗೌಡ ಮಾತನಾಡಿದರು. ಸಂಘದ ನಿರ್ದೇಶಕ ಶಿವಸ್ವಾಮಿ ನಿರೂಪಿಸಿದರು. ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ರಾಜೇಗೌಡ, ಖಜಾಂಚಿ ಟಿ.ನರಸಯ್ಯ, ಗೌರವ ಅಧ್ಯಕ್ಷ ಎಂ.ಕಾಂತರಾಜು, ಕಾರ್ಯಾಧ್ಯಕ್ಷ ಸಿ.ಬೈರಪ್ಪ, ಮಾಗಡಿ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಜಿ.ಶಿವರಾಮಯ್ಯ, ಕನಕಪುರ ತಾಲೂಕು ಘಟಕದ ಚಿಕ್ಕೆಂಪೇಗೌಡ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT