ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಅಜ್ಜ–ಮೊಮ್ಮಗ ಸಾವು

Published 3 ಜೂನ್ 2024, 2:58 IST
Last Updated 3 ಜೂನ್ 2024, 2:58 IST
ಅಕ್ಷರ ಗಾತ್ರ

ರಾಮನಗರ: ತಾಲ್ಲೂಕಿನ ಸಂಗಬಸವನದೊಡ್ಡಿ ಬಳಿ ಬೆಂಗಳೂರು–ಮೈಸೂರು ಹೆದ್ದಾರಿ ಸರ್ವೀಸ್ ರಸ್ತೆಯಲ್ಲಿ ಶನಿವಾರ ಸಂಜೆ ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದ್ದರಿಂದ, ಅಜ್ಜ ಮತ್ತು ಮೊಮ್ಮಗ ಮೃತಪಟ್ಟಿದ್ದಾರೆ. ಬಿಡದಿಯ ಚಿಕ್ಕಣ್ಣ (55) ಮತ್ತು ಅವರ ಮೊಮ್ಮಗ ಯಶಸ್ (10) ಮೃತರು.

ಚಿಕ್ಕಣ್ಣ ಮನೆಯಲ್ಲಿ ಭಾನುವಾರ ಅವರ ಸೊಸೆಯ ಸೀಮಂತ ಕಾರ್ಯವಿತ್ತು. ಅದಕ್ಕಾಗಿ, ಅಚ್ಚಲು ಸಮೀಪದ ಗ್ರಾಮದಲ್ಲಿರುವ ಮಗಳ ಮನೆಗೆ ವಿಷಯ ತಿಳಿಸಿ, ಮೊಮ್ಮಗ ಯಶಸ್‌ನನ್ನು ಬೈಕಿನಲ್ಲಿ ಕರೆದುಕೊಂಡು ಬಿಡದಿ ಕಡೆಗೆ ಹೋಗುತ್ತಿದ್ದರು. ಸಂಜೆ 5.30ರ ಸುಮಾರಿಗೆ ಸಂಗಬಸವನದೊಡ್ಡಿ ಬಳಿ ಹಿಂದಿನಿಂದ ಬಂದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕೆಳಕ್ಕೆ ಬಿದ್ದ ಇಬ್ಬರ ತಲೆ ಮೇಲೂ ಲಾರಿ ಚಕ್ರಗಳು ಹರಿದಿದ್ದರಿಂದ ಸ್ಥಳದಲ್ಲೇ ಕೊನೆಯುಸಿರೆಳೆದರು. ಘಟನೆಗೆ ಸಂಬಂಧಿಸಿದಂತೆ ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಲಾರಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ರಾಮನಗರ ಸಂಚಾರ ಠಾಣೆ ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT