ಸೋಮವಾರ, ಸೆಪ್ಟೆಂಬರ್ 20, 2021
26 °C
ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ

‘ಕನ್ನಡವನ್ನು ಉತ್ತುಂಗಕ್ಕೆ ಬೆಳೆಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಪುರ: ಕನ್ನಡ ಭಾಷೆ ಮತ್ತು ಸಂಸ್ಕೃತಿಗೆ ಎರಡೂವರೆ ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ನಮ್ಮ ಪ್ರಾಚೀನ ಭಾಷೆಯಾದ ಕನ್ನಡವನ್ನು ಉತ್ತುಂಗಕ್ಕೆ ಬೆಳೆಸಬೇಕೆಂದು ನಿವೃತ್ತ ಪ್ರಾಂಶುಪಾಲ ಮಹದೇವಮೂರ್ತಿ ಹೇಳಿದರು.

ನಗರದ ತಾಲ್ಲೂಕು ಕ್ರೀಡಾಂಗಣದ ಹಿಂಭಾಗದಲ್ಲಿರುವ ಅರಳೀಕಟ್ಟೆ ಹಿರಿಯ ನಾಗರಿಕರ ವೇದಿಕೆಯಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕನ್ನಡ ಭಾಷೆ ಮತ್ತು ಕನ್ನಡ ನಾಡಿನ ಸಂಸ್ಕೃತಿ ತುಂಬಾ ವಿಶೇಷತೆ, ವೈವಿಧ್ಯತೆ ಹಾಗೂ ತುಂಬ ವಿಶಿಷ್ಟತೆಗಳಿಂದ ಕೂಡಿರುವ ಈ ಭಾಷೆಯನ್ನು ಮತ್ತಷ್ಟು ಶ್ರೀಮಂತಗೊಳಿಸಿ ಗಟ್ಟಿಯಾಗಿಸಬೇಕೆಂದು ತಿಳಿಸಿದರು.

ಜಿಲ್ಲಾ ಕಸಾಪ ಉಪಾಧ್ಯಕ್ಷ ಶಿವನಹಳ್ಳಿ ಶಿವಲಿಂಗಯ್ಯ ಮಾತನಾಡಿ, ಕನ್ನಡ ಭಾಷೆಗೆ ಎಂಟು ಜ್ಙಾನ ಪೀಠ ಪ್ರಶಸ್ತಿ ಲಭಿಸಿವೆ. ಕನ್ನಡ ನಾಡಿನಲ್ಲಿ ಸಾರ್ವಭೌಮತ್ವವನ್ನು ಹೊಂದಿರುವ ಈ ಕನ್ನಡ ಭಾಷೆಗೆ ಕನಕಪುರದಲ್ಲೂ ಒಂದು ನೆಲೆಗಟ್ಟಿದ್ದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಗರಿಮೆಯಿದೆ. ಕನ್ನಡ ಸಾಹಿತ್ಯ ಕೆಲಸವನ್ನು ಸಾಹಿತಿಗಳು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಆರ್‌.ವಿ. ನಾರಾಯಣ ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಂದ ಸ್ಥಾಪಿತವಾದ ಕನ್ನಡ ಸಾಹಿತ್ಯ ಪರಿಷತ್ತು ಹರಿಯುವ ನೀರಿನ ಹಾಗೆ ಹೊಸತನದೊಂದಿಗೆ ಹೊಸ ಹೊಸ ವಿಚಾರಗಳೊಂದಿಗೆ, ಯುವ ಸಾಹಿತಿಗಳ ಆಗಮನದೊಂದಿಗೆ ಕಾರ್ಯವನ್ನು ನಿರಂತರವಾಗಿ ನಿರ್ವಹಿಸಿಕೊಂಡು ಬರುತ್ತಿದೆ ಎಂದರು.

ಈ ಒಂದು ಕನ್ನಡ ಕಾರ್ಯ ನಿರಂತರವಾಗಿ ಸಾಗಲು ಪ್ರತಿ ತಾಲ್ಲೂಕು ಕೇಂದ್ರದಲ್ಲಿ ಕನ್ನಡ ಭವನ ನಿರ್ಮಾಣವಾಗಬೇಕು. ಅದರಂತೆ ಯಶಸ್ವಿ ಸಾಹಿತ್ಯ ಸಮ್ಮೇಳನವಾಗಿರುವ ಇಲ್ಲಿಯೂ ಒಂದು ಸುಂದರವಾದ ಕನ್ನಡ ಭವನ ನಿರ್ಮಾಣವಾಗಬೇಕೆಂದು ಒತ್ತಾಯಿಸಿದರು.

ಜಿಲ್ಲಾ ಲೇಖಕರ ವೇದಿಕೆ ಅಧ್ಯಕ್ಷ ಕೂ.ಗಿ. ಗಿರಿಯಪ್ಪ, ವಚನ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್ಲೇಗೌಡ ಬೆಸಗರಹಳ್ಳಿ, ಆಕಾಶವಾಣಿ ಜನಪದ ಗಾಯಕ ಚಿಕ್ಕಮರೀಗೌಡ, ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಹುಚ್ಚಪ್ಪ ಮೊದಲಾದವರು ಉಪಸ್ಥಿತರಿದ್ದರು.
ಜಿ.ಎನ್‌. ಸತೀಶ್‌ ಈಚೆಗೆ ಅಗಲಿದ ಮಾಸ್ಟರ್‌ ಹಿರಣಯ್ಯ ಅವರಿಗೆ ನುಡಿನಮನ ಸಲ್ಲಿಸಿದರು. ಬರಗೂರು ಪುಟ್ಟರಾಜು, ಮನೋಹರ.ಪಿ ಗೀತಗಾಯನ ಕಾರ್ಯಕ್ರಮ ನಡೆಸಿಕೊಟ್ಟರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು