ಹಲಗೂರು: ಮದ್ಯ ಅಕ್ರಮ ಮಾರಾಟ ಅಂಗಡಿಗಳ ಮೇಲೆ ಭಾನುವಾರ ದಾಳಿ ಮಾಡಿದ ಹಲಗೂರು ಪೊಲೀಸರು ಸುಮಾರು ₹10 ಸಾವಿರ ಮೌಲ್ಯದ 16 ಲೀಟರ್ ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

ಸಮೀಪದ ಮುತ್ತತ್ತಿ ಗ್ರಾಮದ ಅಂಗಡಿಗಳಲ್ಲಿ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂಬ ದೂರಿನ ಮಾಹಿತಿ ಪಡೆದ ಹಲಗೂರು ಪಿಎಸ್ಐ ಲೋಕೇಶ್ ಮತ್ತು ಸಿಬ್ಬಂದಿ ಚೌಡೇಗೌಡ ಅಂಗಡಿಯ ಮೇಲೆ ದಾಳಿ ಮಾಡಿದ್ದು, ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ 16 ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ. ಹಲಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಲಗೂರು: ಸಮೀಪದ ಹುಲ್ಲಹಳ್ಳಿ ಗ್ರಾಮದ ಹೊರವಲಯದ ನಾಲೆ ಏರಿಯ ಮೇಲೆ ಜೂಜಾಟದಲ್ಲಿ ತೊಡಗಿದ್ದ 7 ಮಂದಿಯನ್ನು ಬಂಧಿಸಿದ ಪೊಲೀಸರು ಜೂಜುಕೋರರಿಂದ ₹66,600 ವಶಪಡಿಸಿಕೊಳ್ಳಲಾಗಿದೆ.

ಭಾನುವಾರ ರಾತ್ರಿ ಗಸ್ತಿನಲ್ಲಿದ್ದಾಗ ಖಚಿತ ಮಾಹಿತಿ ಅಧರಿಸಿದ ಹಲಗೂರು ಪಿಎಸ್ಐ ಲೋಕೇಶ್ ಸಿಬ್ಬಂದಿಯೊಂದಿಗೆ ದಾಳಿ ಮಾಡಿದ್ದು, ಜೂಜುಕೋರರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಜೂಜಾಟವನ್ನು ಸಂಪೂರ್ಣ ನಿಷೇಧ ಮಾಡಲಾಗಿದ್ದು, ಜೂಜುಕೋರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ನಿರ್ದಾಕ್ಷಿಣ್ಯವಾಗಿ ಪ್ರಕರಣ ದಾಖಲಿಸಲಾಗುವುದು ಎಂದು ಪಿಎಸ್ಐ ಲೋಕೇಶ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-40-1157260428

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.