ಮಂಗಳವಾರ, ಫೆಬ್ರವರಿ 18, 2020
16 °C

ಸೋಮವಾರ ಹನುಮ ಜಯಂತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾಗಡಿ: ತಾಲ್ಲೂಕು ಕಾಳಾರಿ ಅಂಚೆ ವರದೋಹಳ್ಳಿ ವರದಾಂಜನೇಯ ಸ್ವಾಮಿ ದೇವಾಲಯದಲ್ಲಿ ಡಿ.9ರಂದು ಬೆಳಿಗ್ಗೆ 11.30ಕ್ಕೆ ಹನುಮ ಜಯಂತ್ಯುತ್ಸವ ನಡೆಯಲಿದೆ ಎಂದು ತಾಲ್ಲೂಕು ಜೆಡಿಎಸ್‌ ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ತಿಳಿಸಿದ್ದಾರೆ.

ಶಾಸಕ ಎ.ಮಂಜುನಾಥ ಚಾಲನೆ ನೀಡಲಿದ್ದಾರೆ. ಕೆಂಪೇಗೌಡ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್‌.ಎಂ.ಕೃಷ್ಣಮೂರ್ತಿ, ರಾಜ್ಯ ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಕೆ.ಕೃಷ್ಣಮೂರ್ತಿ, ತಾಲ್ಲೂಕು ಜೆಡಿಎಸ್‌ ಅಧ್ಯಕ್ಷ ಎಂ.ರಾಮಣ್ಣ, ಭಕ್ತರು ಭಾಗವಹಿಸಲಿದ್ಧಾರೆ. ಮಧ್ಯಾಹ್ನ 12.30ಕ್ಕೆ ಸಾಮೂಹಿಕ ಅನ್ನದಾನ ನಡೆಯಲಿದೆ ಎಂದಿದ್ದಾರೆ.

ಜಯಂತಿ: ಪಟ್ಟಣದ ಹೊಸಪೇಟೆ ರಸ್ತೆ ಸೀತಾರಾಮಾಂಜನೇಯಸ್ವಾಮಿ ದೇವಾಲಯದಲ್ಲಿ ಡಿ.9ರಂದು ಬೆಳಿಗ್ಗೆ 9 ಗಂಟೆಗೆ ಹನುಮ ಜಯಂತಿ ನಡೆಯಲಿದೆ ಎಂದು ಅರ್ಚಕ ವೆಂಕಟೇಶ ಶರ್ಮ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)