ಹನುಮ ಜಯಂತಿ ಅಂಗವಾಗಿ ರಾಮನಗರದ ಗಾಂಧಿನಗರದ ಕೋತಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದರು
ಹನುಮ ಜಯಂತಿ ಅಂಗವಾಗಿ ರಾಮನಗರದ ವಿಜಯನಗರದಲ್ಲಿರುವ ಅಭಯ ಆಂಜನೇಯ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು
ಹನುಮ ಜಯಂತಿ ಅಂಗವಾಗಿ ರಾಮನಗರದ ಅಗ್ರಹಾರದಲ್ಲಿರುವ ಅಭಯ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಭಕ್ತರಿಗೆ ಪ್ರಸಾದ ವಿತರಿಸಲಾಯಿತು
ಹನುಮ ಜಯಂತಿ ಪ್ರಯುಕ್ತ ಹನುಮ ಭಕ್ತರು ಹನುಮ ಮಾಲೆ ಧರಿಸಿ ತಾಲ್ಲೂಕಿನ ಆಂಜನೇಯ ಸ್ವಾಮಿ ದೇವಾಲಯಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು
ಹನುಮ ಜಯಂತಿ ಪ್ರಯುಕ್ತ ರಾಮನಗರ ತಾಲ್ಲೂಕಿನ ಬಿಳಗುಂಬ ಗ್ರಾಮದ ಜಲಸಿದ್ದೇಶ್ವರ ಸ್ವಾಮಿ ಸನ್ನಿಧಿಯಲ್ಲಿರುವ ವೀರಾಂಜನೇಯ ಸ್ವಾಮಿ ದೇವರ ಮೂರ್ತಿಗೆ ವಿಶೇಷಾಲಂಕಾರ ಮಾಡಲಾಗಿತ್ತು