ಹಾರೋಹಳ್ಳಿ: ವಾಯುವಿಹಾರ ಮಾಡುತ್ತಿದ್ದ ವ್ಯಕ್ತಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ ಆರೋಪಿಗಳನ್ನು ಕಗ್ಗಲೀಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕಿರಣ್ ನಾಯ್ಕ (23) ಶಿವಕುಮಾರ್ ನಾಯ್ಕ (32) ಬಂಧಿತ ಆರೋಪಿ. ಜೂನ್ 25ರಂದು ಕಗ್ಗಲೀಪುರ ಪೈಪ್ಲೈನ್ ರಸ್ತೆಯ ಲೇಔಟ್ ಒಂದರಲ್ಲಿ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಕುತ್ತಿಗೆಯಲ್ಲಿದ್ದ ಸುಮಾರು 10ಗ್ರಾಂ ತೂಕದ ಚಿನ್ನದ ಸರವನ್ನು ಕಾರಿನಲ್ಲಿ ಬಂದ ಇಬ್ಬರು ಕಿತ್ತುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಈ ಬಗ್ಗೆ ಶೋಧ ಕಾರ್ಯ ಕೈಗೊಂಡಿದ್ದ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿತರಿಂದ 10 ಗ್ರಾಂ ತೂಕದ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.