ಹಾರೋಹಳ್ಳಿ: ದೊಡ್ಡ ಮುದವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಶಾಸಕ ಇಕ್ಬಾಲ್ ಹುಸೇನ್ ₹4.21ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಮಂಗಳವಾರ ಭೂಮಿ ಪೂಜೆ ನೆರವೇರಿಸಿದರು.

ದೊಡ್ಡ ಮುದವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗರಹಳ್ಳಿ, ಲಿಂಗೇಗೌಡನದೊಡ್ಡಿ, ಅರಟಬೆಲೆ, ಆರುತಿ ಪಾಳ್ಯ, ಮೇಡ್ನಹಳ್ಳಿದೊಡ್ಡಿ, ದಿಂಬದಹಳ್ಳಿ, ಸ್ವತಂತ್ರನಗರ, ಬಂಡಿಗನಹಳ್ಳಿ, ಗೂಗರೆದೊಡ್ಡಿ, ದೊಡ್ಡಮುದವಾಡಿ, ಮತ್ತಿಕುಂಟೆ, ವೀರೇಗೌಡನದೊಡ್ಡಿ, ಸಿಂಗಸಂದ್ರ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ತಾಲ್ಲೂಕಿನಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಲಾಗುತ್ತಿದೆ. ಪ್ರವಾಸೋದ್ಯಮ ಉತ್ತೇಜನಕ್ಕಾಗಿ ಹಲವು ಕೆರೆಗಳನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ. ಕೋಟ್ಯಂತರ ವೆಚ್ಚದ ಕಾಮಗಾರಿಗಳು ಕ್ಷೇತ್ರದಲ್ಲಿ ನಡೆಯುತ್ತಿಯುತ್ತಿದ್ದು, ಇನ್ನೂ ಕೆಲವು ಕಾಮಗಾರಿಗಳಿಗೆ ಮುಂದಿನ ದಿನಗಳಲ್ಲಿ ಚಾಲನೆ ನೀಡಲಾಗುವುದು ಎಂದರು.

ಶಾಸಕ ಇಕ್ಬಾಲ್ ಹುಸೇನ್ ಭೇಟಿ ವೇಳೆ ಸಾರ್ವಜನಿಕರು ಹಲವು ಸಮಸ್ಯೆಗಳನ್ನು ಗಮನಕ್ಕೆ ತಂದರು. ವೃದಾಪ್ಯವೇತನ, ಖಾತೆ ಸಮಸ್ಯೆ, ವಿದ್ಯುತ್ ಕಂಬಗಳ ಸಮಸ್ಯೆ ಸೇರಿದಂತೆ ಇತರ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು. ಸಮಸ್ಯೆ ಆಲಿಸಿದ ಶಾಸಕ ಸ್ಥಳದಲ್ಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿ ಸಮಸ್ಯೆ ಬಗೆಹರಿಸುವಂತೆ ಸೂಚಿಸಿದರು. ಜೊತೆಗೆ ಹಲವು ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟಿದ್ದು, ಶೀಘ್ರ ಏಜೆನ್ಸಿಗಳನ್ನು ಬದಲಿಸಿ ಅಗತ್ಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಇ.ಒ.ಅಪೂರ್ವ ಕುಲಕರ್ಣಿ, ಬಮೂಲ್ ನಿರ್ದೇಶಕ ಎಚ್.ಎಸ್.ಹರೀಶ್ ಕುಮಾರ್, ಅಶೋಕ್, ದಿವ್ಯಾ ಪರಮೇಶ್, ಶಿವಪ್ಪ, ಶಿವಲಿಂಗೇಗೌಡ, ಮುನಿರಾಜು, ಕೃಷ್ಣಪ್ಪ, ರವಿಕುಮಾರ್, ಅಶೋಕ್ ಕುಮಾರ್, ರಾಜು, ಮಾದೇಗೌಡ, ಕೆಂಚಪ್ಪ, ತಮ್ಮಣ್ಣ ಗೌಡ, ಶಿವರಾಜು, ನಿತಿನ್, ದಂಡುಹುಚ್ಚಯ್ಯ, ವೇಣುಗೋಪಾಲ್ ಸೇರಿದಂತೆ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.