ಹಾರೋಹಳ್ಳಿ: ಹತ್ತಾರು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಅರ್ಹ ರೈತರಿಗೆ ದೀರ್ಘ ಕಾಲದಿಂದ ಸಾಗುವಳಿ ಚೀಟಿ ನೀಡುವ ಪ್ರಕ್ರಿಯೆ ಬಾಕಿ ಉಳಿದಿದೆ. ಅವುಗಳಿಗೆ ಶೀಘ್ರ ಪರಿಹಾರ ಒದಗಿಸಲಾಗುವುದು ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.

ಪಟ್ಟಣದ ಬೆಸ್ಕಾಂ ಕಚೇರಿ ಸಭಾಂಗಣದಲ್ಲಿ ನಡೆದ ಬಗರ್ಹುಕುಂ ಸಾಗುವಳಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಗರ್ಹುಕುಂ ಸದಸ್ಯರು ತಾಲ್ಲೂಕು ಮಟ್ಟದ ಅಧಿಕಾರಿಗಳು ಈ ಬಗ್ಗೆ ರೈತರ ಹಿತ ಕಾಯಲು ಹಲವಾರು ಸಭೆ ನಡೆಸಲಾಗಿದೆ.

ದಶಕಗಳಿಂದ ಸರ್ಕಾರಿ ಭೂಮಿ ಉಳುಮೆ ಮಾಡುತ್ತಿರುವ ರೈತರು ಅದನ್ನು ಸಕ್ರಮಗೊಳಿಸುವಂತೆ ಬೇಡಿಕೆ ಇಟ್ಟಿದ್ದರೂ ಅವರ ಮನವಿಯನ್ನು ಈ ಹಿಂದಿನ ಬಗರ್ಹುಕುಂ ಸಕ್ರಮೀಕರಣ ಸಮಿತಿ ನಿರ್ಲಕ್ಷ್ಯ ತೋರಿದ ಹಿನ್ನಲೆಯಲ್ಲಿ ಫಾರಂ ನಂ.57ರಲ್ಲಿ ಅರ್ಜಿಗಳು ಬಾಕಿ ಇದ್ದವು. ರೈತರಿಗೆ ಸಾಗುವಳಿ ಚೀಟಿ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಕ್ಷೇತ್ರ ವ್ಯಾಪ್ತಿ ಫಲಾನುಭವಿಗಳನ್ನು ಗುರ್ತಿಸುವ ಕಾರ್ಯ ನಡೆದಿದೆ. ಅಧಿಕಾರಿಗಳು ಜಡತ್ವ ಬಿಟ್ಟು ಬಾಕಿ ಇರುವ ಪ್ರಕರಣಗಳನ್ನು ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ ಎಂದರು.

ಅರ್ಜಿ ಪರಿಶೀಲನೆ ನಡೆಸಿ, ಕಂದಾಯ ಸಚಿವರ ಗಮನ ಸೆಳೆದು ಭೂ ಮಂಜೂರಾತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಹತ್ತಾರು ವರ್ಷಗಳಿಂದ ಸಾಗುವಳಿ ಚೀಟಿ ಪಡೆಯಲು ಕಾಯುತ್ತಿರುವ ರೈತರ ಸಮಸ್ಯೆ ಪರಿಹರಿಸಿ ಅರ್ಹ ರೈತರಿಗೆ ಜಮೀನು ಹಕ್ಕುಪತ್ರ ನೀಡಲು ಬದ್ಧನಾಗಿದ್ದೇನೆ. ಆದರೆ, ಅಧಿಕಾರಿಗಳು ನಿಧಾನಗತಿಯಲ್ಲಿ ಪ್ರಕ್ರಿಯೆ ಸಾಗುತ್ತಿರುವುದರಿಂದ ಸ್ವಲ್ಪ ವಿಳಂಬವಾಗುತ್ತಿದೆ. ಜಡತ್ವ ಹೊಂದಿರುವ ಅಧಿಕಾರಿಗಳು ಕೂಡ ತ್ವರಿತವಾಗಿ ಕೆಲಸ ನಿರ್ವಹಿಸಲು ಸೂಚನೆ ನೀಡಲಾಗಿದೆ ಎಂದರು.

ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗದಂತೆ ಪಾರದರ್ಶಕ ಹಾಗೂ ಶೀಘ್ರ ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ತಹಶೂಲ್ದಾರ್ ಹರ್ಷವರ್ಧನ್, ಪಟ್ಟಣ ಪಂಚಾಯಿತಿ ಅಧಿಕಾರಿ ಶ್ವೇತಬಾಯಿ, ಸರ್ವೆ ಇಲಾಖೆ ಅಧಿಕಾರಿ ಪ್ರಭಾಕರ್, ಬಗುರ್ ಹುಕುಂ ಸಮಿತಿ ಸದಸ್ಯೆ ಸೌಭಾಗ್ಯಮ್ಮ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-14-166254791

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.