ಹಾರೋಹಳ್ಳಿ: ಶಾಲೆ ಪ್ರವೇಶ ದ್ವಾರದ ಬಳಿ ಇರುವ ಚರಂಡಿ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಶಾಲಾ ವಿದ್ಯಾರ್ಥಿಗಳು ಸ್ವಲ್ಪ ಎಚ್ಚರ ತಪ್ಪಿದರೂ, ಚರಂಡಿಯಲ್ಲಿ ಬೀಳುವುದು ಖಚಿತ ಎಂದು ಸ್ಥಳೀಯ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾರೋಹಳ್ಳಿ ಗ್ರಾಮಾಂತರ ವಿದ್ಯಾಸಂಸ್ಥೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಓದುತ್ತಿದ್ದಾರೆ. ಪ್ರವೇಶ ದ್ವಾರದಲ್ಲೇ ಚರಂಡಿ ಮೇಲೆ ದೊಡ್ಡ ಗುಂಡಿ ಬಿದ್ದಿದೆ. ವಿದ್ಯಾರ್ಥಿಗಳು ಇದಕ್ಕೆ ಬೀಳುವ ಸಾಧ್ಯತೆ ಇದೆ.

ಮಕ್ಕಳು ಚರಂಡಿ ಹತ್ತಿರ ಸುಳಿಯದಂತೆ ಎಚ್ಚರ ವಹಿಸಬೇಕಿದೆ. ಇದು ದೊಡ್ಡ ಸವಾಲಾಗಿದೆ ಎಂದು ಹೆಸರು ಹೇಳಲು ಇಚ್ಛಿಸಿದ ಶಿಕ್ಷಕರೊಬ್ಬರು ಅಲವತ್ತುಕೊಂಡರು.

ಚರಂಡಿ ಮೇಲೆ ಹೊದಿಸಲಾಗಿದ್ದ ಕಾಂಕ್ರೀಟ್ ಕಿತ್ತು ಹೋಗಿದೆ. ಮಕ್ಕಳಿಗೆ ಯಾವುದೇ ತೊಂದರೆಯಾಗುವ ಮುನ್ನ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ ಸರಿಪಡಿಸಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.