

ಪಟ್ಟಣದ ಪಾರ್ಕಿಂಗ್ ಸಮಸ್ಯೆ ಮತ್ತು ಸಂಚಾರ ದಟ್ಟಣೆ ನಿವಾರಣೆಗೆ ಬಿಡದಿ ರಸ್ತೆಯಲ್ಲಿ ವಾಹನ ನಿಲುಗಡೆಗೆ ಜಾಗ ಗುರುತಿಸಲಾಗಿದೆ. ಇನ್ಮುಂದೆ ಅಲ್ಲೇ ವಾಹನ ನಿಲ್ಲಿಸಬೇಕು. ಇಲ್ಲದಿದ್ದರೆ ದಂಡ ವಿಧಿಸಲಾಗುವುದು– ಮಲ್ಲೇಶ್ ಇನ್‌ಸ್ಪೆಕ್ಟರ್ ಹಾರೋಹಳ್ಳಿ ಪೊಲೀಸ್ ಠಾಣೆ
ಪಟ್ಟಣದಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ನಿಲುಗಡೆ ಮಾಡುವುದರಿಂದ ಸಂಚಾರ ದಟ್ಟಣೆ ಸಾಮಾನ್ಯವಾಗಿದೆ. ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಂಡಂತಿರುವ ಪಟ್ಟಣದಲ್ಲಿ ಬಸ್‌ಗಳು ಭಾರಿ ವಾಹನಗಳು ಹೆಚ್ಚಾಗಿ ಸಂಚರಿಸುತ್ತವೆ. ಆದರೆ ಪಟ್ಟಣದಲ್ಲಿ ದೊಡ್ಡ ಹಾಗೂ ಸಣ್ಣ ವಾಹನಗಳ ನಿಲುಗಡೆಗೂ ಸ್ಥಳವಿಲ್ಲ. ಇನ್ನಾದರೂ ಈ ಪಾರ್ಕಿಂಗ್‌ಗಾಗಿ ಸ್ಥಳ ನಿಗದಿ ಮಾಡಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ.– ನಾಗರಾಜು ಸಾಮಾಜಿಕ ಕಾರ್ಯಕರ್ತ ಹಾರೋಹಳ್ಳಿ
ಪಾದಚಾರಿಗಳಿಗೆ ಜಾಗವಿಲ್ಲ ಬಸ್ ನಿಲ್ದಾಣ ಸೇರಿದಂತೆ ಪಟ್ಟಣದ ಮುಖ್ಯರಸ್ತೆಗಳ ಪಾದಚಾರಿ ಮಾರ್ಗಗಗಳು ದ್ವಿಚಕ್ರ ಹಾಗೂ ನಾಲ್ಕು ಚಕ್ರಗಳ ವಾಹನಗಳ ಪಾರ್ಕಿಂಗ್ ಸ್ಥಳವಾಗಿ ಮಾರ್ಪಟ್ಟಿವೆ. ರಸ್ತೆ ಮತ್ತು ಫುಟ್‌ಪಾತ್‌ನಲ್ಲಿ ಅಡ್ಡಾದಿಡ್ಡಿಯಾಗಿ ವಾಹನಗಳನ್ನು ನಿಲ್ಲಿಸುವುದರಿಂದ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಇದರಿಂದ ಅಪಘಾತಗಳೂ ಸಂಭವಿಸುತ್ತಿವೆ. ಪೊಲೀಸರು ಇದಕ್ಕೆ ಕಡಿವಾಣ ಹಾಕಬೇಕು– ಶಿವು ಬನ್ನಿಕುಪ್ಪೆ ಹಾರೋಹಳ್ಳಿ ತಾಲ್ಲೂಕು
ಪಾರ್ಕಿಂಗ್ ಸಮಸ್ಯೆ ಸೇರಿದಂತೆ ವಿವಿಧ ರೀತಿಯ ಸಂಚಾರ ಸಮಸ್ಯೆಗಳಿಗೆ ದಂಡಾಸ್ತ್ರವೊಂದೇ ಪರಿಹಾರ. ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ತೊಂದರೆಯಾಗದಂತೆ ವಾಹನ ನಿಲುಗಡೆ ಮಾಡಿದರೆ ಸಮಸ್ಯೆಯಾಗುವುದಿಲ್ಲ. ಆದರೆ ಜನದಟ್ಟಣೆ ಇರುವ ರಸ್ತೆಗಳಲ್ಲೂ ಬೇಕಾಬಿಟ್ಟಿಯಾಗಿ ನಿಲ್ಲಿಸುತ್ತಾರೆ. ಪೊಲೀಸರು ಅಂತಹ ಸವಾರರಿಗೆ ದಂಡ ವಿಧಿಸಬೇಕು. ಇಲ್ಲದಿದ್ದರೆ ಚಾಲಕರು ಮತ್ತು ಸವಾರರು ಬುದ್ದಿ ಕಲಿಯುವುದಿಲ್ಲ.– ಬಾನುಪ್ರಕಾಶ್ ಹಾರೋಹಳ್ಳಿ ನಿವಾಸಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.