ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿ ನೀಡಬೇಕು, ಉತ್ತಮ ಗುಣಮಟ್ಟದ ಟೇಬಲ್, ಕುರ್ಚಿ, ಅಲ್ಮೆರಾ, ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್, ಸಿಯುಜಿ ಸಿಮ್ ಮತ್ತು ಡೇಟಾ ಗೂಗಲ್ ಕ್ರೋಮ್, ಬುಕ್ ಲ್ಯಾಪ್ ಟಾಪ್, ಪ್ರಿಂಟರ್ ಹಾಗೂ ಸ್ಕ್ಯಾನರ್‌ಗಳನ್ನು ಒದಗಿಸಿ ಕೊಡಬೇಕು. ಮೊಬೈಲ್ ತಂತ್ರಾಂಶಗಳ ಕೆಲಸ ವಿಚಾರವಾಗಿ ಇದುವರೆಗೂ ಆಗಿರುವ ಎಲ್ಲಾ ಅಮಾನತ್ತುಗಳನ್ನು ತಕ್ಷಣವೇ ರದ್ದುಪಡಿಸಬೇಕು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಭದ್ರತೆ ನೀಡಿ ಮತ್ತು ಸುರಕ್ಷಿತವಾದ ಕಟ್ಟಡಗಳನ್ನು ನಿರ್ಮಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.