ಹಾರೋಹಳ್ಳಿ: ಕೆಲವು ತಿಂಗಳ ಹಿಂದಷ್ಟೇ ಪುರಸಭೆಯಾಗಿ ಮೇಲ್ದರ್ಜೆಗೇರಿರುವ ಹಾರೋಹಳ್ಳಿ ವ್ಯಾಪ್ತಿಯ ಮರಳವಾಡಿ ರಸ್ತೆಯಲ್ಲಿ ಹಿಂದೆ ಗ್ರಾಮ ಪಂಚಾಯಿತಿಯಿಂದ ನಿರ್ಮಿಸಿರುವ ಸಾರ್ವಜನಿಕ ಶೌಚಾಲಯ ಬಳಕೆಗೆ ಬಾರದಂತಾಗಿದ್ದು, ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮರಳವಾಡಿ ರಸ್ತೆಯ ಮಾರುಕಟ್ಟೆಯಲ್ಲಿ ಐದು ವರ್ಷದ ಹಿಂದೆ ಹಾರೋಹಳ್ಳಿ ಗ್ರಾಮ ಪಂಚಾಯಿತಿಯಿಂದ ₹10 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ್ದ ಶೌಚಾಲಯ ಈಗ ನಿರುಪಯುಕ್ತವಾಗಿದೆ.

ಶೌಚಾಲಯಗಳನ್ನು ಸಾರ್ವಜನಿಕರು ಓಡಾಡುವ ಅಥವಾ ಜನನಿಬಿಡ ಪ್ರದೇಶಗಳಲ್ಲಿ ನಿರ್ಮಿಸಬೇಕು. ಆದರೆ ಹಾರೋಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಜನರು ಹೆಚ್ಚು ಓಡಾಡದ ಕಡೆ ಶೌಚಾಲಯ ನಿರ್ಮಿಸಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

‘ಲಕ್ಷಾಂತರ ಹಣ ವ್ಯಯಿಸಿ ಕೆಲಸಕ್ಕೆ ಬಾರದ ಸ್ಥಳದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸಿದ್ದಾರೆ. 500ಕ್ಕೂ ಹೆಚ್ಚು ಮಕ್ಕಳಿರುವ ಸರ್ಕಾರಿ ಶಾಲೆಯಲ್ಲಿ ಒಂದೇ ಒಂದು ಶೌಚಾಲಯ ನಿರ್ಮಿಸಲು ಸಾಧ್ಯವಾಗಿಲ್ಲ’ ಎಂದು ಮಧುಸೂಧನ್ ಕಿಡಿಕಾರಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-14-1489309831

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.