
ಗ್ರಾಮಗಳಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ದುರಸ್ತಿ ಕಾಣದ ಪಾಳುಬಿದ್ದಿರುವ ಕುರಿತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಬಳಿ ಮಾಹಿತಿ ಪಡೆದು ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು
–ಅಪೂರ್ವ ಕುಲಕರ್ಣಿ, ಕಾರ್ಯನಿರ್ವಾಹಕ ಅಧಿಕಾರಿ ಹಾರೋಹಳ್ಳಿ ತಾಲ್ಲೂಕು ಪಂಚಾಯಿತಿ
ಜನರ ಅನುಕೂಲಕ್ಕಾಗಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಡಿಕೆಶಿ ಚಾರಿಟೇಬಲ್ ಟ್ರಸ್ಟ್ ಮತ್ತು ಸರ್ಕಾರದಿಂದ ನಿರ್ಮಿಸಿದ ನೀರಿನ ಘಟಕಗಳು ಕೆಲವು ತಿಂಗಳಷ್ಟೇ ಕೆಲಸ ಮಾಡಿವೆ. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಪಾಳುಬಿದ್ದಿವೆ
–ಸಂದೀಪ್, ಗುತ್ತಲಹುಣಸೆ ನಿವಾಸಿ
ನೀರಿನ ಘಟಕಗಳನ್ನು ರಿಪೇರಿ ಮಾಡುವಂತೆ ಸ್ಥಳೀಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾರೂ ಸ್ಪಂದಿಸಿಲ್ಲ. ಇದರಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಯಂತ್ರೋಪಕರಣಗಳು ತುಕ್ಕು ಹಿಡಿದಿವೆ. ಈಗಲಾದರೂ ದುರಸ್ತಿ ಮಾಡಲಿ
–ಸಾಗರ್, ಬೈರೇಗೌಡನ ದೊಡ್ಡಿ ನಿವಾಸಿಹಾರೋಹಳ್ಳಿ ತಾಲ್ಲೂಕಿನ ಮಲ್ಲಿಗೆಮೆಟ್ಲು ಗ್ರಾಮದಲ್ಲಿ ಶುದ್ಧ ನೀರಿನ ಘಟಕ ಕೆಟ್ಟು ಬಂದ್ ಆಗಿದೆ
ಹಾರೋಹಳ್ಳಿ ತಾಲ್ಲೂಕಿನ ಮರಳವಾಡಿ ಪಟ್ಟಣದಲ್ಲಿ ಶುದ್ಧ ನೀರಿನ ಘಟಕ ಕೆಟ್ಟು ಹೋಗಿರುವುದು
ಯಲಚವಾಡಿ ಗ್ರಾಮ ಪಂಚಾಯಿತಿಯ ಲಿಂಗನಾಪುರ ಗ್ರಾಮದಲ್ಲಿ ಶುದ್ಧ ನೀರಿನ ಘಟಕ ನಾಮಕಾವಸ್ಥೆ ತಲುಪಿದೆ
ಹಾರೋಹಳ್ಳಿ ತಾಲ್ಲೂಕಿನ ಚೀಲೂರು ಗ್ರಾಮ ಪಂಚಾಯಿತಿಯ ಕಾಳೇಗೌಡನದೊಡ್ಡಿ ಗ್ರಾಮದಲ್ಲಿ ಕೆಟ್ಟು ಹೋಗಿರುವ ಶುದ್ಧ ನೀರಿನ ಘಟಕ
ಹಾರೋಹಳ್ಳಿ ತಾಲ್ಲೂಕಿನ ವಡೇರಹಳ್ಳಿ ಗ್ರಾಮದಲ್ಲಿ ಶುದ್ಧ ನೀರಿನ ಘಟಕ ನಿರ್ಮಾಣ ಕೆಲಸ ಅಪೂರ್ಣಗೊಂಡಿರುವುದು