ಹಾರೋಹಳ್ಳಿ: ತಾಲ್ಲೂಕಿನ ಟಿ.ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಸಾದೇನಹಳ್ಳಿ ಗ್ರಾಮದಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿಯನ್ನು ಗ್ರಾಮಸ್ಥರೇ ಸ್ವಚ್ಛಗೊಳಿಸುತ್ತಿದ್ದಾರೆ.

ಗ್ರಾಮದಲ್ಲಿ ಚರಂಡಿ ಗಬ್ಬೆದ್ದು ನಾರುತ್ತಿದೆ. ಚರಂಡಿ ಸ್ವಚ್ಚಗೊಳಿಸಿ ಎಂದು ಗ್ರಾಮಸ್ಥರು ಸ್ಥಳೀಯ ಆಡಳಿತಕ್ಕೆ ಹಲವಾರು ಬಾರಿ ಮನವಿ ಮಾಡಿದರೂ ಸ್ಪಂದಿಸದ ಕಾರಣ ಗ್ರಾಮಸ್ಥರೇ ಚರಂಡಿ ಸ್ವಚ್ಛತೆಗೆ ಮುಂದಾಗಿದ್ದೇವೆ ಎಂದು ಗ್ರಾಮಸ್ಥ ಚಂದ್ರಶೇಖರ್ ಹೇಳಿದರು.

ದೊಡ್ಡಸಾದೇನಹಳ್ಳಿ ಗ್ರಾಮ ಪಂಚಾಯಿತಿ ತೆರಿಗೆ ಪಡೆಯುತ್ತಾರೆ. ಆದರೆ, ಮೂಲಸೌಲಭ್ಯ ಕಲ್ಪಿಸುತ್ತಿಲ್ಲ ಎಂದು ಆರೋಪಿಸಿದರು.

ನಾನು ಕೆಲವು ದಿನಗಳ ಹಿಂದಷ್ಟೇ ಪಿಡಿಒ ಆಗಿ ಬಂದಿದ್ದೇನೆ. ವಿಷಯ ಈಗಷ್ಟೇ ಗಮನಕ್ಕೆ ಬಂದಿದೆ. ಕೂಡಲೇ ಸ್ಥಳ ಪರಿಶೀಲನೆ ನಡೆಸಿ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಟಿ.ಹೊಸಹಳ್ಳಿ ಗ್ರಾ.ಪಂ ಪಿಡಿಒ ಮಂಜುಳಾ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.