ಗುರುವಾರ , ಸೆಪ್ಟೆಂಬರ್ 19, 2019
26 °C

‘ಓದಿನೊಂದಿಗೆ ಕ್ರೀಡಾಭ್ಯಾಸವೂ ಇರಲಿ’

Published:
Updated:
Prajavani

ಮಾಗಡಿ: ಸದೃಢ ದೇಹ ಇದ್ದರೆ ಸದೃಢ ಮನಸ್ಸಿರುತ್ತದೆ ಎಂಬ ಮಾತಿನಂತೆ ವಿದ್ಯಾರ್ಥಿಗಳು ವಿದ್ಯೆ ಜತೆಗೆ ಕ್ರೀಡಾರಂಗದಲ್ಲಿ ಸಾಧನೆ ಮಾಡಲು ನಿತ್ಯ ವ್ಯಾಯಾಮ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ಸಿದ್ದೇಶ್ವರ ಕಿವಿಮಾತು ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಕಬಡ್ಡಿ, ಥ್ರೋಬಾಲ್‌, ಯೋಗ ಸ್ಪರ್ಧೆಗಳಿಗೆ ಚಾಲನೆ ನೀಡಿ ಮಾತನಾಡಿದರು.

ಪಠ್ಯ ಪುಸ್ತಕದ ಜತೆಗೆ ದೈಹಿಕ ಕಸರತ್ತು ಮಾಡುವುದು ಇಂದಿನ ಅಗತ್ಯವಾಗಿದೆ. ಯೋಗಾಸನ ಮಾಡುವುದರಿಂದ ರೋಗ ನಿಯಂತ್ರಿಸಿ ಆರೋಗ್ಯವಂತ ಜೀವನ ನಡೆಸಬಹುದು ಎಂದರು.

ತಾಲ್ಲೂಕು ದೈಹಿಕ ಶಿಕ್ಷಣ ಅಧಿಕಾರಿ.ಸಿ.ಬಿ.ಅಶೋಕ್‌, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಚ್‌.ಲೋಕೇಶ್‌, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರತಿನಿಧಿ ಎಂ.ಕೆಂಪೇಗೌಡ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಾಡಬಾಳ್‌ ಶಿವರಾಮಯ್ಯ, ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಮಾಡಬಾಳ್‌ ವೆಂಕಟೇಶ್‌ ಮಾತನಾಡಿದರು.
 

Post Comments (+)