ಗುರುವಾರ , ಫೆಬ್ರವರಿ 25, 2021
28 °C

ರಾಮನಗರ: ಅಭಿಮಾನಿಯ ಅಂತ್ಯಕ್ರಿಯೆಯಲ್ಲಿ ಕುಮಾರಸ್ವಾಮಿ ಭಾಗಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ

ರಾಮನಗರ: ತನ್ನ ಅಂತ್ಯಕ್ರಿಯೆಗೆ ಕುಮಾರಸ್ವಾಮಿ ಬರಬೇಕು ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿಯ ಮನೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭಾನುವಾರ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು.

ರಾಮನಗರ ತಾಲ್ಲೂಕಿನ ಬೊಮ್ಮಚ್ಚನಹಳ್ಳಿ‌‌ ನಿವಾಸಿ, ಆಟೊ ಚಾಲಕ ಜಯರಾಂ ಗ್ಯಾಂಗ್ರೀನ್ ಪೀಡಿತರಾಗಿದ್ದು, ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. 'ಕುಮಾರಣ್ಣ ನನ್ನ ಕುಟುಂಬಕ್ಕೆ ನೆರವಾಗಬೇಕು' ಎಂದು ಅವರು ಡೆತ್ ನೋಟ್ ನಲ್ಲಿ ಕೋರಿದ್ದರು.

' ಜಯರಾಂ ಗ್ಯಾಂಗ್ರೀನ್ ನಿಂದ ಬಳಲಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಬೇಸರ ಆಯಿತು. ಅವರ ಅಂತಿಮ ಇಚ್ಛೆಯಂತೆ ಇಲ್ಲಿಗೆ ಭೇಟಿ‌ ನೀಡಿದ್ದೇನೆ. ಮೃತರಿಗೆ ಸಣ್ಣ ವಯಸ್ಸಿನ ಅಂಗವಿಕಲ ಮಗ ಇದ್ದಾನೆ. ಆತನ ಭವಿಷ್ಯ ರೂಪಿಸಲು ಅಗತ್ಯವಾದ ನೆರವು ನೀಡುತ್ತೇನೆ' ಎಂದು ಕುಮಾರಸ್ವಾಮಿ ತಿಳಿಸಿದರು.

ಇದೇ ಸಂದರ್ಭ ಮೃತರ ಕುಟುಂಬದವರಿಗೆ‌ ನಿಖಿಲ್ ಕುಮಾರಸ್ವಾಮಿ ಧನಸಹಾಯ ನೀಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು