ಕನಕಪುರ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಮೊಮ್ಮಗನನ್ನು ಗೆಲ್ಲಿಸಲು ದೇವೇಗೌಡ ಅವರು ಆಂಬುಲೆನ್ಸ್ನಲ್ಲಿ ಬರುತ್ತಾರೆ ಎಂದು ಡಿ.ಕೆ.ಸುರೇಶ್ ಕೀಳಾಗಿ ಹೇಳಿರುವುದು ಖಂಡನೀಯ. ಅದು ಅವರಿಗೆ ಶೋಭೆ ತರುವುದಿಲ್ಲ ಎಂದು ಜೆಡಿಎಸ್ ಮುಖಂಡ ಸಿದ್ದಮರೀಗೌಡ ಹೇಳಿದ್ದಾರೆ.

ದೇವೇಗೌಡ ಅವರು ತಮ್ಮ ರಾಜಕೀಯ ಜೀವನವನ್ನು ಹೋರಾಟದಿಂದಲೇ ಪ್ರಾರಂಭಿಸಿದರು. ಸೋತಾಗ ಕುಗ್ಗದೆ ಹೋರಾಟ ಮುಂದುವರೆಸಿದ್ದಾರೆ. ದೇಶದ ಪ್ರಧಾನಿಯಾಗಿದ್ದರೂ ಅಧಿಕಾರದ ಅಹಂ ಇಲ್ಲದೆ ತಮ್ಮ ಇಳಿ ವಯಸ್ಸಿನಲ್ಲೂ ಪಕ್ಷ ಸಂಘಟನೆಗಾಗಿ ಧಣಿವಿಲ್ಲದೆ ದುಡಿಯುತ್ತಿದ್ದಾರೆ. ಇಂತಹ ಹಿರಿಯ ರಾಜಕೀಯ ಮುತ್ಸದ್ದಿ ಬಗ್ಗೆ ಕೀಳಾಗಿ ಮಾತನಾಡಬಾರದು ಎಂದಿದ್ದಾರೆ.

ಅಡ್ಡದಾರಿ ಮತ್ತು ಹಿಂಭಾಗಲಿನಿಂದ ಅಭ್ಯರ್ಥಿಯನ್ನು ಹೈಜಾಕ್ ಮಾಡುವ ಡಿ.ಕೆ.ಸುರೇಶ್ ಅವರಿಗೆ ದೇವೇಗೌಡರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ದೇವೇಗೌಡರ ಬಗ್ಗೆ ಹಗುರ ಮತ್ತು ಕೀಳಾಗಿ ಮಾತನಾಡುತ್ತಿರುವ ಡಿ.ಕೆ.ಸುರೇಶ್ಗೆ ಚನ್ನಪಟ್ಟಣ ಕ್ಷೇತ್ರದ ಜನತೆ, ಮತದಾರರು ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.