ಶುಕ್ರವಾರ, ಫೆಬ್ರವರಿ 26, 2021
32 °C

ರಾಮನಗರ: ಪತ್ರಕರ್ತನ ಕುಟುಂಬಕ್ಕೆ ನೆರವಾದ ಎಚ್‌ಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಮಂಗಳವಾರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಪಬ್ಲಿ‌ಕ್‌ ಟಿ.ವಿ. ರಾಮನಗರ ಜಿಲ್ಲಾ ವರದಿಗಾರ ಹನುಮಂತು ಅವರ ಕನಕಪುರ ತಾಲ್ಲೂಕಿನ ಪಡುವಣಗೆರೆ ಮನೆಗೆ ಶಾಸಕ ಎಚ್‌.ಡಿ. ಕುಮಾರಸ್ವಾಮಿ ಬುಧವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಹನುಮಂತು ಅವರ ಪತ್ನಿ ಶಶಿಕಲಾ ಮತ್ತು ಪೋಷಕರಿಗೆ ಧೈರ್ಯ ತುಂಬಿದ ಅವರು ಮಗಳ ಭವಿಷ್ಯವನ್ನು ಉತ್ತಮವಾಗಿ ರೂಪಿಸುವಂತೆ ಕಿವಿಮಾತು ಹೇಳಿದರು. ಇದೇ ಸಂದರ್ಭ ವೈಯಕ್ತಿಕವಾಗಿ  ₹ 5 ಲಕ್ಷ ಮೊತ್ತದ ಚೆಕ್‌ ಅನ್ನು ವಿತರಿಸಿದರು.

ವಿವಿಧೆಡೆ ಶ್ರದ್ಧಾಂಜಲಿ: ಹನುಮಂತು ಅವರ ನಿಧನಕ್ಕೆ ಸಂತಾಪ ಸೂಚಿಸಿ ಜಿಲ್ಲೆಯ ವಿವಿಧೆಡೆ ಬುಧವಾರ ಶ್ರದ್ಧಾಂಜಲಿ ಸಭೆಗಳು ನಡೆದವು. ರಾಮನಗರದ ಎಪಿಎಂಸಿ ಆವರಣದಲ್ಲಿ ರೈತ ಮುಖಂಡ ಎಂ.ಡಿ. ಶಿವಕುಮಾರ್‍ ಮತ್ತು ಆಸಕ್ತರು ಶ್ರದ್ಧಾಂಜಲಿ ಸಲ್ಲಿಸಿದರು. ಲೋಕೇಶ್‌, ಬಸವರಾಜು, ಸಿದ್ಧಲಿಂಗಮೂರ್ತಿ, ರಂಜುಮೌಳಿ, ವಿಶ್ವನಾಥ್ ಇದ್ದರು. ಬಿಜೆಪಿ ಪದಾಧಿಕಾರಿಗಳು ಜಿಲ್ಲಾಸ್ಪತ್ರೆ ಆವರಣದಲ್ಲಿ ನಮನ ಸಲ್ಲಿಸಿದರು. ವಿನೋದ್ ಭಗತ್‌, ಭರತ್‌, ಯೋಗಾನಂದ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು