ಚನ್ನಪಟ್ಟಣ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಜ್ಯ ರಾಜಕಾರಣಕ್ಕೆ ಮರಳುವುದು ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ವಿಚಾರವನ್ನು ಕಾಲವೇ ತೀರ್ಮಾನ ಮಾಡುತ್ತದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಪಟ್ಟಣದಲ್ಲಿ ಬುಧವಾರ ನಡೆದ ಪಕ್ಷದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮಕ್ಕೂ ಮೊದಲು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಮತ್ತೆ ಚನ್ನಪಟ್ಟಣದಿಂದ ಸ್ಪರ್ಧಿಸಿ, ಗೆದ್ದು ಮತ್ತೆ ಈ ರಾಜ್ಯದ ಮುಖ್ಯಮಂತ್ರಿಯಾಗಬೇಕು ಎನ್ನುವುದು ಕಾರ್ಯಕರ್ತರು ಮತ್ತು ಮುಖಂಡರ ಒತ್ತಾಸೆಯಾಗಿದೆ ಎಂದರು.

‘ಜೆಡಿಎಸ್ ಎನ್ಡಿಎ ಮೈತ್ರಿ ಕೂಟದ ಭಾಗ. ಯಾವ ಕ್ಷೇತ್ರಗಳನ್ನು ಜೆಡಿಎಸ್ಗೆ ಬಿಟ್ಟು ಕೊಡುತ್ತಾರೆ. ಯಾರು ಎಲ್ಲಿಂದ ಸ್ಪರ್ಧೆ ಮಾಡಬೇಕು ಎಂದು 2028ರ ವಿಧಾನಸಭಾ ಚುನಾವಣೆ ವೇಳೆಗೆ ತೀರ್ಮಾನವಾಗುತ್ತದೆ. ಈ ಬಗ್ಗೆ ಮೈತ್ರಿಕೂಟದ ರಾಷ್ಟ್ರಮಟ್ಟದ ಹಾಗೂ ರಾಜ್ಯ ಮಟ್ಟದ ನಾಯಕರು ತೀರ್ಮಾನ ಮಾಡುತ್ತಾರೆ. ಕಾಲ ಬರುವವರೆಗೂ ಕಾದು ನೋಡೋಣ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-15-498026490

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.