ಮಂಗಳವಾರ, ಅಕ್ಟೋಬರ್ 22, 2019
26 °C
ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರಕ್ಕೆ ಚಾಲನೆ

‘ಗ್ರಾಮೀಣ ಜನರು ಆರೋಗ್ಯದ ಕಡೆ ಗಮನ ನೀಡಬೇಕು’

Published:
Updated:
Prajavani

ರಾಮನಗರ: ಗ್ರಾಮೀಣ ಪ್ರದೇಶದ ಜನರು ಕೆಲಸದ ಒತ್ತಡದಲ್ಲಿ ತಮ್ಮ ಆರೋಗ್ಯದ ಕಡೆ ಗಮನ ನೀಡುತ್ತಿಲ್ಲ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಪ್ರಭಾವತಿ ಕೆ. ಶಿವಲಿಂಗಯ್ಯ ಹೇಳಿದರು.

ಇಲ್ಲಿನ ಕವಣಾಪುರ ಗ್ರಾಮದ ಬಸವೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ಶುಕ್ರವಾರ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆರೋಗ್ಯದ ಕಡೆ ಗಮನ ನೀಡದೆ ಇರುವುದರಿಂದ ಜನರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆರೋಗ್ಯದಿಂದ ಇದ್ದಾಗ ಮಾತ್ರ ಕೆಲಸಗಳನ್ನು ಮಾಡುವ ಮೂಲಕ ಅಭಿವೃದ್ಧಿ ಸಾಧಿಸಬಹುದು. ಆದ್ದರಿಂದ ಜನರು ಕೆಲಸದ ಜತೆಗೆ ಆರೋಗ್ಯದ ಕಡೆಗೂ ಗಮನ ನೀಡಬೇಕು ಎಂದು ತಿಳಿಸಿದರು.

ರೋಟರಿ ಸಿಲ್ಕ್ ಸಿಟಿ ಕ್ಲಬ್ ಅಧ್ಯಕ್ಷ ಎ.ಜೆ. ಸುರೇಶ್ ಮಾತನಾಡಿ, ಕ್ಲಬ್ ಮೂಲಕ ಉಚಿತ ಆರೋಗ್ಯ ಶಿಬಿರಗಳನ್ನು ತಾಲ್ಲೂಕಿನಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ. ಮಹಿಳೆಯರಿಗಾಗಿ ಬ್ರೆಸ್ಟ್ ಕ್ಯಾನ್ಸರ್ ಪರೀಕ್ಷೆ, ಸ್ತನ ಕ್ಯಾನ್ಸರ್ ಪರೀಕ್ಷೆ ಪೂರ್ಣ ಸುಧಾ ಕ್ಯಾನ್ಸರ್‌ ಫೌಂಡೇಷನ್ ಸಹಯೋಗದಲ್ಲಿ ಸ್ಧಳದಲ್ಲೇ ಅತ್ಯಾಧುನಿಕ ಸೌಲಭ್ಯ ಇರುವ ಬಸ್ ನಲ್ಲಿ ನುರಿತ ವೈದ್ಯರಿಂದ ಪರೀಕ್ಷೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಕೈಲಾಂಚ ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್. ಪಾಂಡುರಂಗ, ಉಪಾಧ್ಯಕ್ಷೆ ಭವ್ಯ ಸುರೇಂದ್ರ, ರೋಟರಿ ಸಿಲ್ಕ್ ಸಿಟಿ ಕ್ಲಬ್ ಕಾರ್ಯದರ್ಶಿ ಆರ್. ಶಿವರಾಜು, ಪದಾಧಿಕಾರಿಗಳಾದ ಲತಾಗೋಪಾಲ್, ಸುಪ್ರಿಯಾಕುಮಾರ್, ರಘುಕುಮಾರ್, ಎಲ್. ಪ್ರಭಾಕರ್, ಬಿಜಿಎಸ್ ಆಸ್ಪತ್ರೆಯ ವೇಣುಗೋಪಾಲ್, ಗ್ರಾಮ ಪಂಚಾಯಿತಿ ಸದಸ್ಯರಾದ ವೆಂಕಟೇಶ್, ಜಿ.ಪಿ. ಗಿರೀಶ್ ವಾಸು, ವರದರಾಜು, ಬೋರಯ್ಯ, ಸೋಮಶೇಖರ್, ಗಿರಿಜ, ಭಾನುಮತಿ, ಪಿಡಿಓ ಸತೀಶ್, ಮುಖಂಡರಾದ ಸುರೇಂದ್ರ, ಅಶ್ವಥ್, ಸ್ವಾಮಿ, ಕರಿಯಪ್ಪ, ಚಂದ್ರಶೇಖರ್ ಇದ್ದರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)