ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಂತುಹುಳು ನಿರ್ಮೂಲನದಿಂದ ಆರೋಗ್ಯ ವೃದ್ಧಿ

Last Updated 10 ಫೆಬ್ರುವರಿ 2020, 14:34 IST
ಅಕ್ಷರ ಗಾತ್ರ

ರಾಮನಗರ: ಎಲ್ಲ ಮಕ್ಕಳು ಜಂತು ಹುಳು ನಿರ್ಮೂಲನ ಮಾತ್ರೆಯನ್ನು ಪಡೆದುಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎನ್. ಮರಿಗೌಡ ಹೇಳಿದರು.

ಇಲ್ಲಿನ ಹನುಮಂತನಗರದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಸೋಮವಾರ ರಾಷ್ಟ್ರೀಯ ಜಂತುಹುಳು ನಿರ್ಮೂಲನಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಲ್ಲಿ ಜಂತುಹುಳು ನಿರ್ಮೂಲನವಾದರೆ ಆರೋಗ್ಯ ವೃದ್ಧಿಯಾಗುತ್ತದೆ. ಜಿಲ್ಲೆಯಲ್ಲಿ ಸುಮಾರು 1 ರಿಂದ 19 ವರ್ಷದ ಮಕ್ಕಳು 2,28,552 ಇರುತ್ತಾರೆ. ಮಕ್ಕಳಿಗೆ ಆಲ್‌ಬೆಂಡಜೋಲ್ ಮಾತ್ರೆಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಿರಂಜನ್ ಮಾತನಾಡಿ ಜಂತುಹುಳು ನಿರ್ಮೂಲನೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಆಲ್‌ಬೆಂಡಜೋಲ್ ಮಾತ್ರೆಗಳನ್ನು 1 ರಿಂದ 19 ವರ್ಷದ ವರಗಿನ ಮಕ್ಕಳಿಗೆ ನೀಡಲಾಗುತ್ತಿದೆ. ಜಿಲ್ಲೆಯ ಎಲ್ಲ‌ ಅಂಗನವಾಡಿ ಮತ್ತು ಶಾಲೆಗಳಲ್ಲಿ ಉಚಿತವಾಗಿ ವಿತರಿಸಲಾಗುತ್ತಿದೆ. 1 ರಿಂದ 6 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಅಂಗನವಾಡಿ ಕೇಂದ್ರಗಳಲ್ಲಿ, 6 ರಿಂದ 19 ವರ್ಷದವರಗಿನ ಮಕ್ಕಳಿಗೆ ಎಲ್ಲ ಶಾಲಾ ಕಾಲೇಜುಗಳಲ್ಲಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ಜಿ.ಎಲ್. ಪದ್ಮಾ ಮಾತನಾಡಿ, ಈ ಮಾತ್ರೆ ಮಕ್ಕಳಿಗೆ ನೀಡುವುದರಿಂದ ಜಂತುಹುಳು ನಿರ್ಮೂಲನವಾಗಿ ರಕ್ತಹೀನತೆ ನಿಯಂತ್ರಿಸುತ್ತದೆ. ಪೌಷ್ಟಿಕಾಂಶ ಸೇವನೆ ಉತ್ತಮ ಪಡಿಸುತ್ತದೆ, ಏಕಾಗ್ರತೆ, ಕಲಿಯುವ ಸಾಮರ್ಥ್ಯ ಉತ್ತಮಗೊಳ್ಳುತ್ತದೆ. ಅಲ್ಲದೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದಕ್ಕೆ ನೆರವಾಗುತ್ತದೆ ಎಂದರು.

ಜಿಲ್ಲೆಯಲ್ಲಿ ಒಟ್ಟು 1 ರಿಂದ 19 ವರ್ಷದ ಮಕ್ಕಳು 2,28,552 ಇದ್ದಾರೆ. ಇವರುಗಳಿಗೆ 1,543 ಅಂಗನವಾಡಿ ಕೇಂದ್ರಗಳಲ್ಲಿ ಹಾಗೂ 1,759 ಶಾಲಾ ಕಾಲೇಜುಗಳಲ್ಲಿ ಜಂತುಹುಳು ನಿರ್ಮೂಲನಾ ಮಾತ್ರೆ ನೀಡಲಾಗುತ್ತದೆ. ಅನಾರೋಗ್ಯ ಕಾರಣದಿಂದ ಶಾಲೆಗೆ ಮತ್ತು ಅಂಗನವಾಡಿ ಕೇಂದ್ರಕ್ಕೆ ಗೈರುಹಾಜರಾದರೆ ಮಕ್ಕಳಿಗೆ ಇದೇ 17 ರಂದು ಮಾಪ್ ಅಪ್ ದಿನ ಮಾತ್ರೆಯನ್ನು ನೀಡಲಾಗುವುದು ಎಂದು ತಿಳಿಸಿದರು.

ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಶಶಿಕಲಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್. ಗಂಗಾಧರ್, ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ರಾಜು, ಡಾ. ರಾಜು ರಾಥೋಡ್, ಡಾ ಚಂದ್ರು, ಮೇಲ್ವಿಚಾರಕ ಶಂಭುಲಿಂಗಯ್ಯ, ಕ್ಷೇತ್ರ ಸಮನ್ವಯ ಶಿಕ್ಷಣಾಧಿಕಾರಿ ಜಿ.ಎಸ್. ಸಂಪತ್ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT