ಮಂಗಳವಾರ, ಅಕ್ಟೋಬರ್ 22, 2019
25 °C

ಆರೋಗ್ಯ ತಪಾಸಣಾ ಶಿಬಿರ

Published:
Updated:
Prajavani

ಕನಕಪುರ: ಇಲ್ಲಿನ ಬಾಣಂತಮಾರಮ್ಮ ಸರ್ಕಾರಿ ಶಾಲೆಯಲ್ಲಿ ಶನಿವಾರ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ನಗರ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಆರೋಗ್ಯ ತಪಾಸಣೆ ನಡೆಸಿದರು.

ಬೆಳಿಗ್ಗೆ 9 ಗಂಟೆಗೆ ಪ್ರಾರಂಭಗೊಂಡ ತಪಾಸಣಾ ಕಾರ್ಯ ಮಧ್ಯಾಹ್ನದವರೆಗೂ ನಡೆಯಿತು. ಬಿ.ಪಿ, ಮಧುಮೇಹ ಸಂಬಂಧಿತ 200 ಮಂದಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

ನಗರ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಲೀನಾ.ಯು, ಶುಶ್ರೂಷಕಿ ಎಸ್‌.ಎನ್‌.ಸ್ವರ್ಣ, ಪ್ರಯೋಗ ಶಾಲಾ ತಜ್ಞೆ ಬಿಂದುಶ್ರೀ ತಪಾಸಣೆ ನಡೆಸಿದರು. ಅಂಗನವಾಡಿ ಕಾರ್ಯಕರ್ತೆಯರಾದ ತುಳಸಮ್ಮ, ಸುವರ್ಣಮ್ಮ, ಆಶಾ ಕಾರ್ಯಕರ್ತೆ ಗೀತಾ, ಶಾಲಾ ಮುಖ್ಯಾಪಾಧ್ಯಾಯ ರಾಮು, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯ ಸ್ಟುಡಿಯೋ ಚಂದ್ರು, ಶೇಖರ್‌, ಪುಟ್ಟಮ್ಮ, ದಿಲ್‌ಸದ್‌ ಬೇಗಂ ಶಿಬಿರದ ನೇತೃತ್ವ ವಹಿಸಿದ್ದರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)