ಕುದೂರು: ಮಹಾನಾಡು ಕಟ್ಟೆಮನೆ, ಡಿಕೆ ಸುರೇಶ್ ಅಭಿಮಾನಿ ಬಳಗ ಹಾಗೂ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಹುಲಿಕಲ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಭಾನುವಾರ ಉಚಿತ ಬೃಹತ್ ಆರೋಗ್ಯ ತಪಾಸಣಾ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ನಡೆಯಿತು.

ಕಣನೂರು ಮತ್ತು ಹುಲಿಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡಿದ್ದರು. ಎಂ.ಎಸ್ ರಾಮಯ್ಯ ಆಸ್ಪತ್ರೆ ವೈದ್ಯರು ರೋಗಿಗಳನ್ನು ತಪಾಸಣೆ ಮಾಡಿದರು. ಶಿಬಿರದಲ್ಲಿ ಚರ್ಮರೋಗ, ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ, ಸಾಮಾನ್ಯ ಶಸ್ತ್ರಚಿಕಿತ್ಸೆ, ಇಸಿಜಿ, ಶ್ವಾಸಕೋಶ, ಕ್ಯಾನ್ಸರ್, ಸ್ತ್ರೀರೋಗ, ಫಿಜಿಯೋಥೆರಪಿ, ಹಲ್ಲಿನ ಚಿಕಿತ್ಸೆ, ಬಿಪಿ ಮತ್ತು ಸಕ್ಕರೆ ಕಾಯಿಲೆ ಸೇರಿದಂತೆ ವಿವಿಧ ತಪಾಸಣೆ ಮಾಡಲಾಯಿತು.

ಕೆಂಚೇಗೌಡ, ವಿನಯ್ ಗೌಡ, ತಮ್ಮಯ್ಯ, ರವೀಂದ್ರ, ದೇವರಾಜು, ಮಂಡ್ಯ ವೆಂಕಟೇಶ್, ದೇವೇಂದ್ರ ಕುಮಾರ್, ಚಿಗಳೂರು ಗಂಗಾಧರ್, ರವೀಶ್ ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.