ಭಾನುವಾರ, ಡಿಸೆಂಬರ್ 15, 2019
23 °C

ಪರಿಣಾಮಕಾರಿ ಕಲಿಕೆಗೆ ಆರೋಗ್ಯ ಮುಖ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಮನುಷ್ಯನಿಗೆ ಮಾನಸಿಕ ಆರೋಗ್ಯದಷ್ಟೇ ದೈಹಿಕ ಆರೋಗ್ಯವೂ ಮುಖ್ಯ. ವಿದ್ಯಾಭ್ಯಾಸದ ಸಂದರ್ಭದಲ್ಲಿ ಮಕ್ಕಳು ದೈಹಿಕವಾಗಿ ಆರೋಗ್ಯವಾಗಿದ್ದರೆ ಕಲಿಕೆ ಪರಿಣಾಮಕಾರಿಯಾಗಿರುತ್ತದೆ ಎಂದು ಎಂ.ಎಚ್. ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಚ್. ಚಂದ್ರಶೇಖರ್ ಹೇಳಿದರು.

ಇಲ್ಲಿನ ಎಂ.ಎಚ್. ನ್ಯಾಷನಲ್ ಪಬ್ಲಿಕ್ ಇಂಗ್ಲಿಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಂದ ದೈಹಿಕ ಆರೋಗ್ಯ ಜಾಗೃತಿಗಾಗಿ ಶನಿವಾರ ಆಯೋಜಿಸಿದ್ದ ಸೈಕಲ್ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರತಿ ಮನೆಗಳಲ್ಲೂ ಪೋಷಕರು ತಮ್ಮ ಮಕ್ಕಳ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಬೇಕು. ಆಗ ಮಕ್ಕಳು ಕಲಿಯಲು ಉತ್ಸುಕರಾಗುತ್ತಾರೆ ಎಂದು ತಿಳಿಸಿದರು.

ಇಂದಿನ ಒತ್ತಡದ ಜೀವನಶೈಲಿ ಮತ್ತು ಆರೋಗ್ಯದ ಬಗ್ಗೆ ಇರುವ ನಿರ್ಲಕ್ಷ್ಯದಿಂದ ಜನ ಸಣ್ಣ ವಯಸ್ಸಿನಲ್ಲೇ ನಾನಾ ಖಾಯಿಲೆಗಳಿಗೆ ತುತ್ತಾಗಿ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಪೋಷಕರು ಮಕ್ಕಳಿಗೆ ಶಿಕ್ಷಣ ಕೊಡಿಸುವ ಜತೆಗೆ ಆರೋಗ್ಯದ ಕಡೆಗೆ ಒತ್ತು ನೀಡಿ ಅವರ ಸರ್ವತೋಮುಖ ಬೆಳವಣಿಗೆಗೆ ನೆರವಾಗಬೇಕು ಎಂದು ತಿಳಿಸಿದರು.

ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಇದರಿಂದ ಉತ್ತಮವಾದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಮೊಬೈಲ್ ಬಳಕೆಯಿಂದ ದೂರವಿದ್ದು, ಸದಭಿರುಚಿಯ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ಶಾಲೆಯ ಪ್ರಾಚಾರ್ಯೆ ಅಂಬಿಕಾ ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು