ರಾಮನಗರ: ನಗರದ ಹೊರವಲಯದಲ್ಲಿರುವ ಅರ್ಚಕರಹಳ್ಳಿಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕ್ಯಾಂಪಸ್ ನಿರ್ಮಾಣ ಕಾಮಗಾರಿಯನ್ನು ಶೀಘ್ರ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಭರವಸೆ ನೀಡಿದರು.

ಅರ್ಚಕರಹಳ್ಳಿಗೆ ಬುಧವಾರ ಭೇಟಿ ನೀಡಿ ಸ್ಥಳ ಪರಿಶೀಲಿಸಿದ ಅವರು, ಲಭ್ಯವಿರುವ ಜಾಗದಲ್ಲಿಯೇ ಆಡಳಿತಾತ್ಮಕ ಮಂಜೂರಾತಿ ಪಡೆದು ಕೂಡಲೇ ನಿರ್ಮಾಣ ಕೆಲಸಗಳನ್ನು ಆರಂಭಿಸುವಂತೆ ರಾಜೀವ್ ಗಾಂಧಿ ವಿವಿ ಕುಲಪತಿ ಡಾ.ಸಚ್ಚಿದಾನಂದ ಹಾಗೂ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭ ಉಪಮುಖ್ಯಮಂತ್ರಿ ‘ವಿ.ವಿಗೆ ಅಗತ್ಯವಿರುವ ಇನ್ನಷ್ಟು ಭೂಮಿಯ ಬಗ್ಗೆ ಕೆಲ ಪ್ರಕರಣಗಳು ನ್ಯಾಯಾಲಯದಲ್ಲಿವೆ. ವಿಚಾರಣೆ ಮುಗಿದು ಆದೇಶ ಹೊರಬಿದ್ದ ಮೇಲೆ ಉಳಿದ ಪ್ರಕ್ರಿಯೆಗಳನ್ನು ವೇಗವಾಗಿ ಪೂರೈಸಬಹುದು. ಕೋರ್ಟ್ ಆದೇಶದಂತೆ ಭೂ ಮಾಲೀಕರಿಗೆ ಪರಿಹಾರ ನೀಡಲಾಗುವುದು. ಅದುವರೆಗೂ ಸ್ವಾಧೀನದಲ್ಲಿರುವ ಭೂಮಿಯಲ್ಲಿ ನಿರ್ಮಾಣ ಕಾಮಗಾರಿಗಳನ್ನು ಆರಂಭಿಸಲಾಗುವುದು’ ಎಂದರು.

ಭೂಮಿ ಹಸ್ತಾಂತರ: ‘ಈಗಾಗಲೇ 216 ಎಕರೆ ಭೂಮಿಯನ್ನು ವಿ.ವಿ.ಗಾಗಿ ಸ್ವಾಧೀನ ಮಾಡಿಕೊಳ್ಳಲಾಗಿದೆ. ಈ ಪೈಕಿ 40 ಎಕರೆ ಸರಕಾರಿ ಜಮೀನು. ಸ್ವಾಧೀನ ಮಾಡಿಕೊಂಡಿರುವ ಕೆಲ ರೈತರ ಭೂಮಿಗೆ ಈಗಾಗಲೇ ಪರಿಹಾರ ನೀಡಲಾಗಿದೆ. ಸುಮಾರು 70 ಎಕರೆಗೆ ಸಂಬಂಧಿಸಿದ ಪರಿಹಾರ ವಿವಾದ ನ್ಯಾಯಾಲಯದಲ್ಲಿ ಇದೆ. ಕೋರ್ಟ್ ಆದೇಶದ ಪ್ರಕಾರ ಪರಿಹಾರ ನೀಡುತ್ತೇವೆ. ಸ್ವಾಧೀನದಲ್ಲಿ ಇರುವ ಜಮೀನಿನಲ್ಲಿ ಕ್ಯಾಂಪಸ್ ನಿರ್ಮಾಣ ಮಾಡಬೇಕು’ ಎಂದು ತಿಳಿಸಿದರು.

‘ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಜೊತೆ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಆದಷ್ಟು ಬೇಗ ಕಾಮಗಾರಿಗಳನ್ನು ಆರಂಭಿಸಲು ಅವರೂ ಉತ್ಸುಕರಾಗಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳಾದ ಸಚಿವ ಸಿ.ಪಿ.ಯೋಗೀಶ್ವರ್, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಶಾಸಕರಾದ ಡಿ.ಕೆ.ಶಿವಕುಮಾರ್, ಅನಿತಾ ಕುಮಾರಸ್ವಾಮಿ, ಮಾಗಡಿ ಮಂಜುನಾಥ್ ಹಾಗೂ ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಎಲ್ಲರೂ ಈ ಯೋಜನೆಯನ್ನು ಬೇಗ ಕಾರ್ಯಗತ ಮಾಡುವಂತೆ ಹೇಳುತ್ತಿದ್ದಾರೆ’ ಎಂದು ಡಿಸಿಎಂ ಮಾಹಿತಿ ನೀಡಿದರು.

ಆರೋಗ್ಯ ವಿವಿ ಜತೆಯಲ್ಲಿಯೇ ಸುಸಜ್ಜಿತವಾದ ಹೆಲ್ತ್ ಸಿಟಿಯನ್ನೂ ಇಲ್ಲಿ ನಿರ್ಮಾಣ ಮಾಡುವುದು ಸರ್ಕಾರ ಉದ್ದೇಶವಾಗಿದೆ. ಈ ಎರಡು ಯೋಜನೆಗಳು ಕಾರ್ಯಗತವಾದರೆ ಈ ಭಾಗದ ಜನರಿಗೆ ರಾಮನಗರದಲ್ಲಿಯೇ ಅಂತರರಾಷ್ಟ್ರೀಯ ಗುಣಮಟ್ಟದ ಚಿಕಿತ್ಸೆ ದೊರೆಯುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಶಾಸಕಿ ಅನಿತಾ ಕುಮಾರಸ್ವಾಮಿ, ಆರೋಗ್ಯ ವಿ.ವಿ. ಕುಲಪತಿ ಡಾ.ಸಚ್ಚಿದಾನಂದ, ಜಿಲ್ಲಾಧಿಕಾರಿ ಅರ್ಚನಾ, ಜಿಲ್ಲಾ ಪಂಚಾಯಿತಿ ಸಿಇಒ ಇಕ್ರಂ, ಕೆಐಎಡಿಬಿ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.