ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯಪೂರ್ಣ ಕ್ರೀಡೆಗಳು ಅವಶ್ಯಕ

ಚನ್ನಪಟ್ಟಣದಲ್ಲಿ ಸರ್ಕಾರಿ ನೌಕರರ ತಾಲ್ಲೂಕು ಮಟ್ಟದ ಕ್ರೀಡಾಕೂಟ
Last Updated 14 ಡಿಸೆಂಬರ್ 2019, 12:59 IST
ಅಕ್ಷರ ಗಾತ್ರ

ಚನ್ನಪಟ್ಟಣ: ಸದಾ ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ಸರ್ಕಾರಿ ನೌಕರರಿಗೆ ಇಂತಹ ಆರೋಗ್ಯ ಪೂರ್ಣವಾದ ಕ್ರೀಡೆಗಳು ಅವಶ್ಯಕ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಎಸ್.ನಟರಾಜ್ ಅಭಿಪ್ರಾಯಪಟ್ಟರು.

ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಸರ್ಕಾರಿ ನೌಕರರ ತಾಲ್ಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ದೈಹಿಕ ಹಾಗೂ ಮಾನಸಿಕ ನೆಮ್ಮದಿ ನೀಡುವ ಕ್ರೀಡೆಗಳು ಪ್ರತಿಯೊಬ್ಬರಿಗೂ ಅತ್ಯವಶ್ಯಕವಾಗಿದೆ. ಪ್ರತಿನಿತ್ಯ ಒಂದಲ್ಲಾ ಒಂದು ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುವ ಸರ್ಕಾರಿ ನೌಕರರಿಗೆ ಕ್ರೀಡಾಕೂಟ ಆಯೋಜಿಸಿರುವುದರಿಂದ ಸರ್ಕಾರಿ ನೌಕರರು ಇದರ ಸದುಪಯೋಗ ಪಡೆದುಕೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣ ಮಾಡಬೇಕು ಎಂದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಹರೂರು ರಾಜಣ್ಣ ಮಾತನಾಡಿ, ಕ್ರೀಡೆಗಳು ಮನುಷ್ಯನನ್ನು ದೈಹಿಕವಾಗಿ ಸದೃಢ ಮಾಡುವುದರ ಜೊತೆಗೆ ಮಾನಸಿಕ ಸ್ಥಿರತೆಯನ್ನು ಕಾಯ್ದುಕೊಳ್ಳಲು ಸಹಕಾರಿಯಾಗಿದೆ ಎಂದರು.

ಸರ್ಕಾರಿ ನೌಕರರೆಲ್ಲ ಒಂದು ಕಡೆ ಸೇರಿ ಅವರಲ್ಲಿರುವ ಕ್ರೀಡಾ ಪ್ರತಿಭೆಗಳನ್ನು ಹೊರ ಹಾಕಲು ಇಂತಹ ಕ್ರೀಡಾಕೂಟಗಳ ನಿರಂತರವಾಗಿ ನಡೆಯುತ್ತಿರಬೇಕು. ಅಲ್ಲದೆ ತಮ್ಮ ಜಂಜಾಟದ ವೃತ್ತಿಗಳ ಜೊತೆಗೆ ಈ ರೀತಿಯ ಕ್ರೀಡೆಗಳಿಂದ ಸದಾ ಲವಲವಿಕೆ ಬರುತ್ತದೆ ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜು ಮಾತನಾಡಿ, ಎಲ್ಲ ಇಲಾಖೆಗಳಿಗೆ ಸೇರಿದ ಸರ್ಕಾರಿ ನೌಕರರು ಒಂದೇ ಸೂರಿನಡಿ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವುದು ಆರೋಗ್ಯಕರ ಬೆಳವಣಿಗೆ. ಕ್ರೀಡೆ, ಯೋಗ, ಇತರೆ ಆರೋಗ್ಯಕರ ಚಟುವಟಿಕೆಗಳಲ್ಲಿ ತೊಡಗಿದಾಗ ಮಾತ್ರ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದರು.

ತಹಶೀಲ್ದಾರ್ ಸುದರ್ಶನ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ್, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರಾಜಶೇಖರ್, ಸಿದ್ದೇಗೌಡ, ನಗರಸಭಾ ಪೌರಾಯುಕ್ತ ಶಿವಾಂಕರಿಗೌಡ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರವೀಂದ್ರ, ತಾಲ್ಲೂಕು ಅಧ್ಯಕ್ಷ ರಾಮ್ದಾಸ್, ತಾಲ್ಲೂಕು ಪಂಚಾಯಿತಿ ಇಒ ಚಂದ್ರು, ತಾಲ್ಲೂಕು ಆರೋಗ್ಯಾಧಿಕಾರಿ ರಾಜು, ಭಾರತೀಯ ಜೀವವಿಮಾ ನಿಗಮದ ಅಭಿವೃದ್ಧಿ ಅಧಿಕಾರಿ ಡಿ.ಚಂದ್ರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT