ಶನಿವಾರ, ಫೆಬ್ರವರಿ 4, 2023
17 °C

ರಾಮನಗರ: ಮುಂದುವರಿದ ಮಳೆ ಅಬ್ಬರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಜಿಲ್ಲೆಯಲ್ಲಿ ಸೋಮವಾರ ರಾತ್ರಿಯೂ ಭಾರಿ ಮಳೆ ಸುರಿದಿದ್ದು, ಅಲ್ಲಲ್ಲಿ ಜನಜೀವನಕ್ಕೆ ತೊಂದರೆ ಆಗಿದೆ.

ಕನಕಪುರ ತಾಲ್ಲೂಕಿನ ಹಾರೋಹಳ್ಳಿ ಭಾಗದಲ್ಲಿ ಅತಿ ಹೆಚ್ಚು ಮಳೆ ಸುರಿದಿದ್ದು, ಸಾಕಷ್ಟು ಮನೆಗಳಿಗೆ ನೀರು ನುಗ್ಗಿದೆ. ಕಾರ್ಖಾನೆಗಳು ಜಲಾವೃತಗೊಂಡಿವೆ. 

ರಾಮನಗರ ತಾಲ್ಲೂಕಿನ ಮೇಗಳದೊಡ್ಡಿ ಕೆರೆಯಲ್ಲಿ ದೊಡ್ಡ ಬಿರುಕು ಕಾಣಿಸಿಕೊಂಡಿದ್ದು, ಏರಿ ಒಡೆಯುವ ಆತಂಕ ಎದುರಾಗಿದೆ. ಚನ್ನಪಟ್ಟಣ ತಾಲ್ಲೂಕಿನ ಕೊಂಡಾಪುರದಲ್ಲಿ ಕೆರೆ ಕೋಡಿ ಬಿದ್ದು, ಮೂವತ್ತಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ದಿನಬಳಕೆ ಸಾಮಗ್ರಿಗಳು, ತೋಟಗಳಲ್ಲಿನ ತೆಂಗು ನೀರಿ‌ನಲ್ಲಿ ತೇಲಿದೆ. ರೇಷ್ಮೆ ಬೆಳೆಗೂ‌ ಹಾನಿಯಾಗಿದೆ. 

ಸಾಕಷ್ಟು ಕಡೆಗಳಲ್ಲಿ ರಸ್ತೆಗಳು ಕೊಚ್ಚಿ ಹೋಗಿವೆ. ಈವರೆಗೆ ಜಿಲ್ಲೆಯಲ್ಲಿ ಮಳೆಯಿಂದಾಗಿ 600 ಹೆಕ್ಟೇರ್ ಗೂ ಹೆಚ್ಚು ಬೆಳೆ ಹಾನಿ ಸಂಭವಿಸಿದ್ದು, 250ಕ್ಕೂ ಹೆಚ್ಚು ಮನೆಗಳು ಕುಸಿದಿವೆ. 4 ಸಾವಿರಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಜಿಲ್ಲಾಡಳಿತ ಏಳು ಕಾಳಜಿ ಕೇಂದ್ರಗಳನ್ನು ತೆರೆದಿದ್ದು, 750ಕ್ಕೂ ಹೆಚ್ಚು ಮಂದಿ ಆಶ್ರಯ ಪಡೆದಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು