ರಾಮನಗರ: ನಗರದಲ್ಲಿ ಶನಿವಾರ ಮಧ್ಯಾಹ್ನ ಧಾರಾಕಾರವಾಗಿ ಮಳೆ ಸುರಿಯಿತು. ಬಿಸಿಲಿನಿಂದ ಬಸವಳಿದಿದ್ದ ನಗರಕ್ಕೆ ಬಿರು ಮಳೆ ತಂಪೆರೆಯಿತು.
ಮಧ್ಯಾಹ್ನ 3.30ರ ಹೊತ್ತಿಗೆ ಸಣ್ಣದಾಗಿ ಶುರುವಾದ ಮಳೆ, ನಂತರ ಜೋರಾಗಿ ಸುರಿಯಿತು. ಸತತ 20 ನಿಮಿಷ ಬಿಡದೆ ಸುರಿದ ಮಳೆಗೆ ರಸ್ತೆಗಳು ಜಲಾವೃತವಾದವು. ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಮಳೆಯಿಂದಾಗಿ ಪರದಾಡಿದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.